Sunday, September 8, 2024

ಕೆಪಿಸಿಸಿ ಕಚೇರಿಯಲ್ಲಿ ಕೆಲಸ ಮಾಡುವ ಪೌರ ಕಾರ್ಮಿಕರರಿಗೆ ಮನೆ ಭಾಗ್ಯ!

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಕೆಲಸ ಮಾಡುವ ಪೌರಕಾರ್ಮಿಕರಿಗೆ ಮನೆ ಭಾಗ್ಯ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದಾರೆ.

ನಗರದ ಕೆಪಿಸಿಸಿ ಕಚೇರಿಯಲ್ಲಿ ಇಂದು ಕಾಂಗ್ರೆಸ್​ ಕಾರ್ಯಕರ್ತರಿಂದ ಅಹವಾಲು ಸ್ವೀಕರಿಸುವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮುಖ್ಯಮಂತ್ರಿಗಳನ್ನು ಭೇಟಿಯಾದ ಪೌರಕಾರ್ಮಿಕರಾದ ಜಯಂತಿ, ಅರ್ಚನಾ, ಸುಗಂಧಿ, ಆಶಾ, ಸಂಧ್ಯಾ ಅವರು ಮನವಿ ಸಲ್ಲಿಸಿ, ತಾವು ಹಲವು ವರ್ಷಗಳಿಂದ ಕೆಪಿಸಿಸಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದು ನಮಗೆ ವಾಸಕ್ಕೆ ಮನೆ ಇಲ್ಲ, ಆದ್ದರಿಂದ ತಾವುಗಳು ನಮಗೆ ಮನೆ ಮಾಡಿಸಿಕೊಡಬೇಕು ಎಂದು ಮನವಿ ಮಾಡಿಕೊಂಡರು.

ಇದನ್ನೂ ಓದಿ: ಲೂಟಿ ಮಾಡುವುದಷ್ಟೇ ಕಾಂಗ್ರೆಸ್ ಸರ್ಕಾರದ ಕೆಲಸ: ಆರ್. ಅಶೋಕ್

ಇದಕ್ಕೆ ಸ್ಪಂದಿಸಿದ ಸಿಎಂ, “ನಮ್ಮ ಕಚೇರಿಯಲ್ಲಿ ಕೆಲಸ ಮಾಡುತ್ತಾ ಇದ್ದೀರಾ. ನಿಮಗೆ ರಾಜೀವ್ ಗಾಂಧಿ ವಸತಿ ನಿಗಮದ ಅಡಿ ಮನೆ ನೀಡಲಾಗುವುದು ಅಂತ ಭರವಸೆ ನೀಡುವುದರ ಜೊತೆಗೆ ಕೂಡಲೇ  ಕ್ರಮ ತೆಗೆದುಕೊಳ್ಳಬೇಕು” ಎಂದು ಅಧಿಕಾರಿಗಳಿಗೆ  ಸ್ಥಳದಲ್ಲೇ ಸೂಚನೆ  ನೀಡಿದರು.

ನಿಗಮ ಮಂಡಳಿ ನೇಮಕಾತಿ ಶೇ.90 ರಷ್ಟು ಮುಗಿದಿದೆ:

ಇನ್ನೂ ಇದೇ ಸಂದರ್ಭದಲ್ಲಿ ನಿಗಮ ಮಂಡಳಿಯಲ್ಲಿ ನೇಮಕದ ಮನವಿಗೆ ಪ್ರತಿಕ್ರಿಯಿಸಿದ ಸಿಎಂ. ಶೇ.90 ರಷ್ಟು ನಿಗಮ ಮಂಡಳಿಯ ಅಧ್ಯಕ್ಷರನ್ನು ನೇಮಕಾತಿ ಮಾಡಲಾಗಿದೆ. ಸುಮಾರು 10-15 ಮಂಡಳಿಗಳಿಗೆ ನಾನು ಮತ್ತು ಕೆಪಿಸಿಸಿ ಅಧ್ಯಕ್ಷರಾದ ಶಿವಕುಮಾರ್ ಅವರು ಸೇರಿ ಚರ್ಚೆ ನಡೆಸಿ ನೇಮಕಾತಿ ಮಾಡುತ್ತೇವೆ. ಈಗಾಗಲೇ ಜಿಲ್ಲಾ, ತಾಲ್ಲೂಕು ಗ್ಯಾರಂಟಿ ಸಮಿತಿಗಳಲ್ಲಿ ಅವಕಾಶ ಮಾಡಿಕೊಡಲಾಗಿದೆ. ಜೊತೆಗೆ ಒಂದಷ್ಟು ಮಂಡಳಿಗಳಲ್ಲಿ ನಿರ್ದೇಶಕ ಸ್ಥಾನಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಹೇಳಿದರು.

ವರದಿ: ಮಲ್ಲಂಡಳ್ಳಿ ಶಶಿಧರ್​

RELATED ARTICLES

Related Articles

TRENDING ARTICLES