Sunday, September 8, 2024

ತಮಿಳುನಾಡಿಗೆ ನೀರು ಹರಿಸದಂತೆ ಸಿ.ಎಸ್ ಪುಟ್ಟರಾಜು ಆಗ್ರಹ

ಮಂಡ್ಯ: ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸದಂತೆ ಸಿಎಸ್ ಪುಟ್ಟರಾಜು ಆಗ್ರಹಿಸಿದ್ದಾರೆ. ಪಾಂಡವಪುರದಲ್ಲಿ ಮಾತನಾಡಿದ ಅವರು, ಕಾವೇರಿಯನ್ನು ತಮಿಳುನಾಡಿಗೆ ನೀರು ಹರಿಸಬಾರದು. ಒಂದು ವೇಳೆ ನೀರು ಹರಿಸಲು ಮುಂದಾದರೆ ಜಿಲ್ಲೆಯ ರೈತರೊಂದಿಗೆ ಹೋರಾಟ ಮಾಡುವಂತೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಬೈಕ್​ಗೆ ರೆಡಿ ಮಿಕ್ಸ್​ ಸಿಮೆಂಟ್​ ಲಾರಿ ಡಿಕ್ಕಿ: ಬೈಕ್​ ಸವಾರ ಸ್ಥಳದಲ್ಲೇ ಸಾವು!

ಒಕ್ಕೂಟ ವ್ಯವಸ್ಥೆ ಹಾಗೂ ಕಾನೂನು ಚೌಕಟ್ಟು ವ್ಯವಸ್ಥೆಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಸಮಸ್ಯೆ ಬಗೆಹರಿಸುವ ಬಗ್ಗೆ ವಿಶ್ವಾಸ ನೀಡಿದ್ದಾರೆಂದು ಪುಟ್ಟರಾಜು ತಿಳಿಸಿದ್ದಾರೆ. ಜಿಲ್ಲೆಯ ಜನರಿಗೆ ತೊಂದರೆ ಆಗದ ರೀತಿ ಕುಮಾರಣ್ಣ ನಡೆದುಕೊಳ್ಳುತ್ತಾರೆ. ಇಲ್ಲಿಯವರೆಗೆ ನಂದೆ ಅಂತಿದ್ದರು ಜಿಲ್ಲೆಯ ಜನ ತೀರ್ಪು ಕೊಟ್ಟ ಮೇಲೆ ಕದ್ದು ಓಡಾಡುತ್ತಿದ್ದಾರೆ ಅಂತಾ ಚಲುವರಾಯಸ್ವಾಮಿಗೆ ಸಿ.ಎಸ್. ಪುಟ್ಟರಾಜು ಪರೋಕ್ಷವಾಗಿ ಟೀಕಿಸಿದ್ದಾರೆ. ಯಾವುದೇ ಕಾರಣಕ್ಕೂ ಕಾವೇರಿ ನೀರನ್ನ ತಮಿಳುನಾಡಿಗೆ ಬಿಡಬಾರದು. ರೈತರ ಜಮೀನಿನಲ್ಲಿ ನೀರಿಲ್ಲದೆ ತೆಕ್ಕಲು ಬೆಳೆದು ನಿಂತಿದೆ. ಯಾವ ಜವಾಬ್ದಾರಿಯನ್ನು ಯಾರು ನಿರ್ವಹಿಸಬೇಕು ಅನ್ನೋದನ್ನ ಅಂಬೇಡ್ಕರ್ ಸಂವಿಧಾನದಲ್ಲಿ ಬರೆದಿಟ್ಟಿದ್ದಾರೆ. ನಾವು ರೈತರ ಪರ ಇದ್ದೇವೆ ಕೆಲಸ ಮಾಡ್ತೇವೆ ಅಂತಾ ಹೇಳಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ಮೋದಿ ಅವರನ್ನ ಭೇಟಿ ಮಾಡಿ ಕಾವೇರಿ ಸಮಸ್ಯೆ ಬಗ್ಗೆ ಚರ್ಚೆ ಮಾಡ್ತಾರೆ ಎಂದು ಮಾಜಿ ಸಚಿವ ಸಿಎಸ್ ಪುಟ್ಟರಾಜು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES