Sunday, September 8, 2024

ಶಾಲಾ ಕಟ್ಟಡ ಕುಸಿತ; 22ಕ್ಕೂ ಹೆಚ್ಚು ವಿದ್ಯಾರ್ಥಿಗಳ ಸಾವು

ನೈಜೀರಿಯಾ: ಉತ್ತರ ನೈಜೀರಿಯಾದಲ್ಲಿ ಶುಕ್ರವಾರ ಬೆಳಿಗ್ಗೆ ಭಾರೀ ದುರಂತವೊಂದು ನಡೆದಿದೆ. ತರಗತಿ ನಡೆಯುತ್ತಿದ್ದ ವೇಳೆ ಎರಡು ಅಂತಸ್ತಿನ ಶಾಲಾ ಕಟ್ಟಡ ಕುಸಿದು 22 ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಸಿದ್ಧರಾಮಯ್ಯ ಒಬ್ಬ ಕಡು ಭ್ರಷ್ಟ ಮುಖ್ಯಮಂತ್ರಿ: ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ

ಪ್ಲಾಟೂ ರಾಜ್ಯದ ಬುಸಾ ಬುಜಿ ಸಮುದಾಯದಲ್ಲಿರುವ ಸೇಂಟ್ಸ್ ಅಕಾಡೆಮಿಯ ವಿದ್ಯಾರ್ಥಿಗಳು ತರಗತಿಗೆ ಹಾಜರಾದ ಕೆಲವೇ ಗಂಟೆಗಳಲ್ಲಿ ಈ ದುರ್ಘಟನೆ ನಡೆದಿದೆ. ಒಟ್ಟು 154 ವಿದ್ಯಾರ್ಥಿಗಳು ಅವಶೇಷಗಳ ಅಡಿಯಲ್ಲಿ ಸಿಕ್ಕಿಬಿದ್ದಿದ್ದು, ಅವರಲ್ಲಿ 132 ಮಂದಿಯನ್ನು ರಕ್ಷಿಸಲಾಗಿದೆ. ಇನ್ನು ಈ ಘಟನೆಯಲ್ಲಿ 22 ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ನೈಜೀರಿಯಾದ ರಾಷ್ಟ್ರೀಯ ತುರ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ. ಅಷ್ಟೇ ಅಲ್ಲದೇ ಕಳಪೆ ಕಾಮಗಾರಿ ಮತ್ತು ಕಟ್ಟಡ ನದಿ ದಡದ ಬಳಿಯಿರುವುದು ದುರಂತಕ್ಕೆ ಬಹುದೊಡ್ಡ ಕಾರಣ ಎನ್ನಲಾಗುತ್ತಿದೆ.

RELATED ARTICLES

Related Articles

TRENDING ARTICLES