Tuesday, September 17, 2024

ಭಾರೀ ಮಳೆ ಹಿನ್ನಲೆ: 5 ಜಿಲ್ಲೆಯಲ್ಲಿ ರೆಡ್​​ ಅಲರ್ಟ್​​​​​

ಬೆಂಗಳೂರು: ರಾಜ್ಯದ ವಿವಿಧೆಡೆ ಇಂದು ಸಹ ಭಾರಿ ಗಾಳಿ-ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಐದು ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್‌ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಪವರ್ ಟಿವಿಗೆ ‘ಸುಪ್ರೀಂ’ ಪವರ್!

ಹಾಸನ ಹಾಗೂ ಕೊಡಗು ಜಿಲ್ಲೆಗೆ ಆರೆಂಜ್ ಅಲರ್ಟ್, ಬೀದ‌ರ್, ಕಲಬುರಗಿ, ಯಾದಗಿರಿ ಹಾಗೂ ರಾಯಚೂರು, ವಿಜಯಪುರ, ಬೆಳಗಾವಿ ಸೇರಿದಂತೆ ಧಾರವಾಡ, ಹಾವೇರಿ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಉದ್ದಕ್ಕೂ ಬಿರುಗಾಳಿಯ ಆರ್ಭಟ ಹೆಚ್ಚಿರುವ ಸಾಧ್ಯತೆಯಿದೆ. ಗಂಟೆಗೆ 35 ಕಿ.ಮೀ.ನಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ. ಸಮುದ್ರದಲ್ಲಿ ಭಾರಿ ಅಲೆಗಳು ಕಾಣಿಸಿಕೊಳ್ಳಬಹುದು. ಆದ್ದರಿಂದ, ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಎಚ್ಚರ ವಹಿಸಬೇಕು ಎಂದು ಇಲಾಖೆ ಎಚ್ಚರಿಕೆ ನೀಡಿದೆ.

RELATED ARTICLES

Related Articles

TRENDING ARTICLES