Sunday, September 8, 2024

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಶಾಸಕ ಸಿ.ಬಿ ಸುರೇಶ್ ಬಾಬು ನೇಮಕ

ಬೆಂಗಳೂರು : ಮುಂಗಾರು ವಿಧಾನಸಭೆ ಅಧಿವೇಶನ ಇಂದಿನಿಂದ ಅಂದರೆ (ಜುಲೈ 15,2024) ಆರಂಭವಾಗುತ್ತಿರುವ ಹಿನ್ನಲೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಬೇಕಿತ್ತು. ಹಾಗಾಗಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠರಾದ ಹೆಚ್‌.ಡಿ ದೇವೇಗೌಡ ಹಾಗೂ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಪಕ್ಷದ ನಾಯಕರ ಜೊತೆಗೆ ಚರ್ಚೆ ನಡೆಸಿ ಶಾಸಕ ಸಿಬಿ ಸುರೇಶ್‌ ಬಾಬು ಅವರನ್ನ ಜೆಡಿಎಸ್‌ ಶಾಸಕಾಂಗ ಪಕ್ಷ ನಾಯಕರನ್ನಾಗಿ ನೇಮಕ ಮಾಡಲಾಗಿದೆ.

 ಈ ಹಿಂದೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕನ ಜವಾಬ್ದಾರಿ ಕೇಂದ್ರ ಸಚಿವ ಎಚ್. ಡಿ.ಕುಮಾರಸ್ವಾಮಿ ಅವರ ಮೇಲಿದ್ದು, ದೇವೇಗೌಡರ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಂಡು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಚಿಕ್ಕನಾಯಕನಹಳ್ಳಿ ಶಾಸಕ ಸಿಬಿ ಸುರೇಶ್ ಬಾಬು ನೇಮಕ ಮಾಡಲಾಗಿದೆ.

ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನ ಜುಲೈ 15, 2024 ಸೋಮವಾರದಂದು ಆರಂಭವಾಗಿದ್ದು, ಜುಲೈ 15-26ರ ವರೆಗೆ ನಡೆಯಲಿದೆ. ಚನ್ನಪಟ್ಟಣದ ಶಾಸಕರಾಗಿದ್ದ ಮತ್ತು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿದ್ದ ಹೆಚ್​​.ಡಿ.ಕುಮಾರಸ್ವಾಮಿಯವರು ಲೋಕಸಭಾ ಸದಸ್ಯರಾದ ಹಿನ್ನಲೆಯಲ್ಲಿ, ಅವರ ಸ್ಥಾನಕ್ಕೆ ನಾಯಕನ ಆಯ್ಕೆ ಆಗಬೇಕಿದೆ. ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನನ್ನ ಹೆಗಲ ಮೇಲಿದೆ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಜೊತೆ ಚರ್ಚಿಸಿ ಅಂತಿಮಗೊಳಿಸುವುದಾಗಿ ಕುಮಾರಸ್ವಾಮಿ ಹೇಳಿದ್ದರು. ಇದೀಗ ಶಾಸಕ ಸಿ.ಬಿ ಸುರೇಶ್‌ ಬಾಬು ಅವರನ್ನ ಜೆಡಿಎಸ್‌ ಶಾಸಕಾಂಗ ಪಕ್ಷ ನಾಯಕರನ್ನಾಗಿ ನೇಮಕ ಮಾಡಲಾಗಿದೆ.

RELATED ARTICLES

Related Articles

TRENDING ARTICLES