Saturday, September 21, 2024

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಆಗಸ್ಟ್​​ 1ರಿಂದ 7ನೇ ವೇತನ ಆಯೋಗ ಜಾರಿ

ಬೆಂಗಳೂರು: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಗುಡ್‌ನ್ಯೂಸ್‌ ನೀಡಿದೆ. ಆಗಸ್ಟ್‌ 1 ರಿಂದ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿ ಮಾಡುವುದಾಗಿ ನಿರ್ಧರಿಸಲಾಗಿದೆ. ಈ ಮೂಲಕ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರಿದೆ.

ಸೋಮವಾರ ಸಂಜೆ ವಿಧಾನಸೌಧದಲ್ಲಿ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ಈ ಮಹತ್ವದ ನಿರ್ಣಯವನ್ನು ಕೈಗೊಳ್ಳಲಾಗಿದೆ. ಸದ್ಯ ಈ ಬಗ್ಗೆ ಸಿಎಂ ಕಚೇರಿಯಿಂದ ಮಾಹಿತಿ ಬಂದಿದ್ದು, 2024 ಆಗಸ್ಟ್ 1 ರಿಂದ 7 ನೇ ವೇತನ ಆಯೋಗ ಜಾರಿ ಮಾಡುವ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಇಂದು ದ್ವಿತೀಯ ಪಿಯು ಪರೀಕ್ಷೆ- 3ರ ಫಲಿತಾಂಶ ಪ್ರಕಟ

ವೇತನ ಆಯೋಗವು ಶೇ.27.5 ವೇತನ ಪರಿಷ್ಕರಣೆಗೆ ಶಿಫಾರಸು ಮಾಡಿತ್ತು. ಹಿಂದಿನ ಸರಕಾರದ ಅವಧಿಯಲ್ಲಿ ಶೇ.17ರ ಮಧ್ಯಂತರ ಪರಿಹಾರ ನೀಡಲಾಗಿದ್ದು, ಅಂತಿಮವಾಗಿ ಶೇ 10.5 ವೇತನ ಪರಿಷ್ಕರಣೆಯಾಗಲಿದೆ. ಸರ್ಕಾರಿ ನೌಕರರಿಗೆ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯ ಶಿಫಾರಸುಗಳ ಜಾರಿಗೆ ಸಾಕಷ್ಟು ಒತ್ತಡ ಸರ್ಕಾರದ ಮೇಲಿತ್ತು. ಮೊದಲ ದಿನದ ಅಧಿವೇಶನದ ಬಳಿಕ ಸೋಮವಾರ ಸಂಜೆ ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಂಪುಟ ಸಭೆ ನಡೆಯಿತು. ಸಂಪುಟ ಕಾರ್ಯಸೂಚಿಯಲ್ಲಿ ಈ ವಿಷಯ ಪ್ರಸ್ತಾಪವಾಗಿದ್ದು, ಎಲ್ಲಾ ಸಚಿವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

RELATED ARTICLES

Related Articles

TRENDING ARTICLES