Sunday, September 8, 2024

ಟೆಂಪಲ್​ನಲ್ಲಿ ಜಾರಿ ಬಿದ್ದ ಮಾಜಿ ಸಚಿವ ಹೆಚ್​.ಡಿ ರೇವಣ್ಣ; ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ

ಹಾಸನ: ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರಿಗೆ ಪಕ್ಕೆಲುಬಿಗೆ ಪೆಟ್ಟಾಗಿರುವಂತಹ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿ ದೇವೇಶ್ವರ ದೇವಾಲಯದಲ್ಲಿ ನಡೆದಿದೆ.

ಸದ್ಯ ಹೊಳೆನರಸೀಪುರ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಏಕಾದಶಿ ಪ್ರಯುಕ್ತ ಉಪವಾಸವಿದ್ದು, ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ವೇಳೆ ಪೂಜೆ ಸಲ್ಲಿಸಿ ಬರುವಾಗ ಜಾರಿ ಬಿದಿದ್ದು, ಪಕ್ಕೆಲುಬುಗೆ ಪೆಟ್ಟಾಗಿದೆ.

ಇನ್ನು ಹೆಚ್.ಡಿ.ರೇವಣ್ಣ ಕಿಡ್ನ್ಯಾಪ್ ಕೇಸ್ ಎದುರಿಸುತ್ತಿದ್ದಾರೆ. ಅತ್ಯಾಚಾರ ಸಂತ್ರಸ್ತೆಯನ್ನ ಕಿಡ್ನ್ಯಾಪ್ ಮಾಡಿದ್ದಾರೆ ಅಂತ ಮೈಸೂರಿನ ಕೆ.ಆರ್.ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೇ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ರೇವಣ್ಣ, ಸದ್ಯ ಬೇಲ್ ಮೇಲೆ ಹೊರಗಿದ್ದಾರೆ. ಆದರೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ತನಿಖೆ ಮುಗಿಸಿ, ಚಾರ್ಜ್​ಶೀಟ್ ಸಲ್ಲಿಕೆಗೆ ತಯಾರಿ ನಡೆಸಿದೆ.

10 ದಿನ ಜೈಲು ಅನುಭವಿಸಿ ಹೆಚ್​ಡಿ ರೇವಣ್ಣ ಈಗ ಹೊರ ಬಂದಿದ್ದಾರೆ. 3 ದಿನ ಪೊಲೀಸ್ ಕಸ್ಟಡಿ ಮತ್ತು 6 ದಿನ ಜೈಲುಶಿಕ್ಷೆ ಅನುಭವಿಸಿದ್ದರು. ಪತ್ನಿ ಭವಾನಿ ರೇವಣ್ಣ ವಿರುದ್ಧ ಮೈಸೂರು ಜಿಲ್ಲೆ ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಕೇಸ್ ದಾಖಲಾಗಿತ್ತು. ಭವಾನಿ ರೇವಣ್ಣ ಸೂಚನೆ ಮೇರೆಗೆ ಕಾರು ಚಾಲಕ ಅಜಿತ್‌, ಸಂತ್ರಸ್ತೆಯನ್ನು ಮನೆಯಿಂದ ಕಾರಿನಲ್ಲಿ ಕರೆದೊಯ್ದ ಆರೋಪವಿತ್ತು.

ಕಿಡ್ನ್ಯಾಪ್ ಬಗ್ಗೆ K.R.ನಗರ ಠಾಣೆಯಲ್ಲಿ ದೂರು ಸಂತ್ರಸ್ತೆ ಮಗ ದೂರು ನೀಡಿದ್ದರು. ವಿಚಾರಣಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ನಿರಾಕರಿಸಿತ್ತು. ಹೈಕೋರ್ಟ್ ಮೆಟ್ಟಿಲೇರಿದ್ದ ಭವಾನಿಗೆ ಮಧ್ಯಂತರ ಜಾಮೀನು ಸಿಕ್ಕಿತ್ತು. ಆದರೆ, ಕೆ.ಆರ್​.ನಗರ ಮತ್ತು ಹಾಸನಕ್ಕೆ ಹೋಗುವಂತಿಲ್ಲ ಅಂತಾ ಷರತ್ತು ವಿಧಿಸಿ ಭವಾನಿಗೆ ಬೇಲ್ ನೀಡಲಾಗಿತ್ತು.

RELATED ARTICLES

Related Articles

TRENDING ARTICLES