Sunday, September 8, 2024

ಉದ್ಯೋಗ ವಿಚಾರದಲ್ಲಿ ಕನ್ನಡಿಗರೊಂದಿಗೆ ಸರ್ಕಾರ ಚೆಲ್ಲಾಟ: ಬಿವೈ ವಿಜಯೇಂದ್ರ ಆರೋಪ

ಬೆಂಗಳೂರು: ಖಾಸಗಿ ಉದ್ಯಮದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಒದಗಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ಕನ್ನಡಿಗರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡಿಗರಿಗೆ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಮೀಸಲು ಬಗ್ಗೆ ವಿಧೇಯಕ ತಡೆಹಿಡಿದ ಸರಕಾರದ ಕ್ರಮವನ್ನು ಅವರು ಟೀಕಿಸಿದ್ದಾರೆ. ಈ ಬಗ್ಗೆ ಅವರು ʼಎಕ್ಸ್‌ʼನಲ್ಲಿ ಪೋಸ್ಟ್‌ ಮಾಡಿದ್ದಾರೆ. “ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ? ತಡೆಹಿಡಿದಿದ್ದೇಕೆ? ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ? ಅಪಮಾನಿಸಲು ನಿಮಗೆ ಕನ್ನಡಿಗರೇ ಬೇಕಿತ್ತೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಓಮಿನಿ ಕಾರಿನ ಮೇಲೆ ಗುಡ್ಡ ಕುಸಿತ!

“ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ದಿಢೀರ್ ತಡೆಹಿಡಿದು ಕನ್ನಡ-ಕನ್ನಡಿಗ-ಕರ್ನಾಟಕವನ್ನು ಅಪಮಾನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ರಣಹೇಡಿ ನಿರ್ಧಾರವನ್ನು ಸಮಸ್ತ ಕರುನಾಡ ಜನರ ಪರವಾಗಿ ಖಂಡಿಸುವೆ” ಎಂದಿದ್ದಾರೆ.

ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ:

ಇಂದು ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಲು ಸಜ್ಜಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್​​ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ರಾಜ್ಯ ಸರ್ಕಾರದ ಭ್ರಷ್ಟಾಚಾರ ಹಾಗೂ ಸಿಎಂ ರಾಜೀನಾಮೆಗೆ ಒತ್ತಾಯ ಮಾಡಿ ಪ್ರತಿಭಟನೆ ನಡೆಸಲಿದ್ದಾರೆ. ವಿಪಕ್ಷ ನಾಯಕ ಆರ್. ಅಶೋಕ್ ವಿಜೇಯಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಫ್ರೀಡಂ ಪಾರ್ಕ್​​ನಲ್ಲಿ ಪ್ರತಿಭಟನೆ ನಡೆಸಿ ನಂತರ ವಿಧಾನ ಸೌದಕ್ಕೆ ಮುತ್ತಿಗೆ ಹಾಕಲು ಪ್ಲಾನ್ ಮಾಡಲಾಗಿದೆ.

RELATED ARTICLES

Related Articles

TRENDING ARTICLES