Tuesday, September 17, 2024

ಬೆಳ್ಳಂ ಬೆಳಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ!

ಬೆಂಗಳೂರು: ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಆದಾಯ ಮೀರಿ ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಆರೋಪದಡಿ ಶುಕ್ರವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. 12 ಜನ ಅಧಿಕಾರಿಗಳಿಗೆ ಸೇರಿದ 55 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ತಪಾಸಣೆ ನಡೆಸಿದ್ದಾರೆ.

ಬೆಂಗಳೂರು ನಗರದ ಆರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇಬ್ಬರು, ಶಿವಮೊಗ್ಗ ಜಿಲ್ಲೆಯ ಇಬ್ಬರು, ಯಾದಗಿರಿ, ತುಮಕೂರಿನಲ್ಲಿ ತಲಾ ಓರ್ವ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ರೈತನಿಗೆ ಅವಮಾನ: ಒಂದು ವಾರ GT Mall ಬಂದ್​ಗೆ ಸಚಿವರು ಸೂಚನೆ

ತುಮಕೂರು- ಕೆಐಎಡಿಬಿ ಇಲಾಖೆ ಆಪರೇಟಿಂಗ್ ಆಫೀಸರ್, ಯಾದಗಿರಿ- ಬಲವಂತ್ ಜಿಲ್ಲಾ ಪಂಚಾಯತ್​ ಯಾದಗಿರಿ ಪ್ರಾಜೆಕಟ್​, ಬೆಂಗಳೂರು ಗ್ರಾ- ಆರ್ ಸಿದ್ದಪ್ಪ ಸೀನಿಯರ್​ ಪಶುವೈದ್ಯ- ದೊಡ್ಡಬೆಳವಂಗಲ ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾ- ಕೆ ನರಸಿಂಹ ಮೂರ್ತಿ ಪೌರಾಡಳಿತ ಆಯುಕ್ತ ಹೆಬ್ಬಗೋಡಿ, ಬೆಂಗಳೂರು ನಗರ- ಬಿ ವಿ ರಾಜ FDA KDB LAND acquisition, ಬೆಂಗಳೂರು ನಗರ- ರಮೇಶ್ ಕುಮಾರ್ ಜಾಯಿಂಟ್​ ಕಮಿಷನರ್ ಕಮಷಿಯಲ್ ಟ್ಯಾಕ್ಸ್​,

ಬೆಂಗಳೂರು ನಗರ- ಅಥ್ತಾರ್ ಅಲಿ- ಡೆಪ್ಯೂಟಿ ಕಂಟ್ರೋಲರ್​ ಲೀಗಲ್​ ಭೂ ವಿಜ್ಞಾನ, ಶಿವಮೊಗ್ಗ- ನಾಗೇಶ್​ ಬಿ- ಅಧ್ಯಕ್ಷ ಅಂತರಗಂಗೆ ಗ್ರಾ.ಪಂ. ಭದ್ರವತಿ, ಶಿವಮೊಗ್ಗ- ಪ್ರಕಾಶ್​​ ಡೆಪ್ಯೂಟಿ ಡೈರೆಕ್ಟರ್​ ಆರ್ಟಿಕಲ್ಚರ್​ ಶಿವಮೊಗ್ಗ, ಬೆಂಗಳೂರು ನಗರ-ಚೇತನ್ ಕುಮಾರ್ ಕಾರ್ಮಿಕ ಇಲಾಖಾಧಿಕಾರಿ ಮಂಡ್ಯ ವಿಭಾಗ, ಬೆಂಗಳೂರು ನಗರ – ಆನಂದ್ ಸಿಎಲ್​- ಆಯುಕ್ತ ಮಂಗಳೂರು ಮಹಾನಗರ ಪಾಲಿಕೆ, ಬೆಂಗಳೂರ ನಗರ- ಮಂಜುನಾಥ್​ TR- ಫಸ್ಟ್​ ಡಿವಿಜನ್​ ಅಸಿಸ್ಟೆಂಟ್​ (FDA) ಬೆಂಗಳೂರು ಉತ್ತರ ವಿಭಾಗ, ಈ ಎಲ್ಲ ಅಧಿಕಾರಿಗಳಿಗೆ ಸಂಬಂಧಿಸಿದ 55 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

RELATED ARTICLES

Related Articles

TRENDING ARTICLES