Monday, September 16, 2024

Boycott Phonepe: ಫೋನ್​ ಪೇ ವಿರುದ್ದ ಕನ್ನಡಿಗರು ಆಕ್ರೋಶ

ಬೆಂಗಳೂರು: ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿಯನ್ನು ಕಡ್ಡಾಯಗೊಳಿಸುವ ಬಗ್ಗೆ ಕರ್ನಾಟಕ ಸರ್ಕಾರದ ಹೊಸ ಮಸೂದೆಗೆ ಖಾಸಗಿ ಕಂಪನಿಗಳು ವಿರೋಧ ವ್ಯಕ್ತಪಡಿಸಿದೆ ಈ ಕುರಿತು ಫೋನ್​ಪೇ ಸಿಇಓ ಸಮೀರ್​ ನಿಗಮ್​ ಟ್ವೀಟ್​ ಮಾಡಿದ ಬೆನ್ನಲ್ಲೇ ರಾಜ್ಯಾದ್ಯಂತ Phoenpe ಪೇಮೆಂಟ್​ ಆ್ಯಪ್​ ಅನ್ನು ತಮ್ಮ ಮೊಬೈಲ್​ ಫೋನ್​ಗಳಿಂದ ಅನ್ ಇನ್ಸ್ಟಾಲ್​ ಮಾಡುವಂತೆ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದಾರೆ.

ಈ ಕುರಿತು Phonepe CEO ಸಮೀರ್​ ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಹಂಚಿಕೊಂಡಿದ್ದಾರೆ. ‘ನನಗೆ ಈಗ 46 ವರ್ಷ. 15 ವರ್ಷಕ್ಕಿಂತ ಹೆಚ್ಚು ಕಾಲ ಯಾವ ರಾಜ್ಯಗಳಲ್ಲಿಯೂ ಉಳಿದಿಲ್ಲ. ನನ್ನ ತಂದೆ ನೌಕಾಪಡೆಯಲ್ಲಿ ಕೆಲಸ ಮಾಡುತ್ತಿದ್ದರು. ಹೀಗಾಗಿ ಅವರನ್ನು ದೇಶದಾದ್ಯಂತ ವಿವಿಧ ಸ್ಥಳಗಳಲ್ಲಿ ನಿಯೋಜನೆ ಮಾಡುತ್ತಿದ್ದರು. ಅವರ ಮಕ್ಕಳು ಕರ್ನಾಟಕದಲ್ಲಿ ಉದ್ಯೋಗಕ್ಕೆ ಅರ್ಹರಲ್ಲವೇ?. ನಾನು ಒಂದು ಸಂಸ್ಥೆಯನ್ನು ಕಟ್ಟಿದ್ದೇನೆ, ದೇಶದಾದ್ಯಂತ 25 ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿದ್ದೇನೆ. ನನ್ನ ಮಕ್ಕಳು ಅವರ ತವರು ನಗರದಲ್ಲಿ ಉದ್ಯೋಗಕ್ಕೆ ಅರ್ಹರಲ್ಲವೇ?’ ಎಂದು ಬರೆದುಕೊಂಡಿದ್ದರು.

ಇದನ್ನೂ ಓದಿ: ಜೈಲಿನಲ್ಲಿ ನಟೋರಿಯಸ್​ ರೌಡಿ ಬರ್ತಡೆ ಆಚರಿಸಿದ ದರ್ಶನ್, ಬ್ಯಾರಕ್​ನಲ್ಲೇ ಭರ್ಜರಿ ಬಾಡೂಟ

ಸದ್ಯ, ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ವಿರೋಧ ಮಾಡಿರುವ ಫೋನ್‌ ಪೇ ವಿರುದ್ಧ ಅಭಿಯಾನ ಶುರುವಾಗಿದೆ. ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕುರಿತಂತೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿರುವ ಹೊತ್ತಿನಲ್ಲೇ CEO ಸಮೀರ್ ನಿಗಮ್ ಅಸಮಾಧಾನ ಹೊರ ಹಾಕಿದ್ದರು.

ಕನ್ನಡಪರ ಸಂಘಟನೆಗಳು ವಿರುದ್ಧ ಆಕ್ರೋಶ ಹೊರ ಹಾಕಿದ್ದು ಅಭಿಯಾನ ಆರಂಭಿಸಿವೆ. ಕನ್ನಡಿಗರು ಈ ಅಪ್ಲಿಕೇಷನ್ ಬಳಸಬೇಡಿ ಎಂದು ಕರೆ ನೀಡಲಾಗಿದೆ. ಫೋನ್ ಪೇ ವಿರುದ್ಧ ಹೊರಾಟಕ್ಕೆ ಕನ್ನಡಿಗರು ಹಾಗೂ ಹೋರಾಟಗಾರರು ಮುಂದಾಗಿದ್ದಾರೆ. ಫೋನ್‌ ಪೇಗೆ 1 ರೇಟಿಂಗ್‌ ನೀಡಿ ಮೊಬೈಲ್‌ನಿಂದ ಆ್ಯಪ್‌ ಡಿಲೀಟ್‌ ಮಾಡಿ ಎಂಬ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

RELATED ARTICLES

Related Articles

TRENDING ARTICLES