Tuesday, September 17, 2024

ಜೈನ ಧರ್ಮದವರ ಕ್ಷಮೆ ಕೇಳಿದ ಹಂಸಲೇಖ

ಬೆಂಗಳೂರು: ಜೈನ ಸಮುದಾಯದ ಬಗ್ಗೆ ಲಘುವಾಗಿ ಮಾತನಾಡಿದ ಸಂಗೀತ ನಿರ್ದೇಶಕ ಹಂಸಲೇಖ ಕ್ಷಮೆ ಕೇಳಿದ್ದಾರೆ.

ಇತ್ತೀಚೆಗೆ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ್ದ ಹಂಸಲೇಖ ಅವರು‘ಜೈನರ ಫಿಲಾಸಫಿಯಲ್ಲಿ 24 ಜನ್ಮಗಳು ಇವೆಯಂತೆ. ಅದೆಲ್ಲ ಸುಳ್ಳು, ಬುಲ್​ಶಿಟ್ ಎಂದು ಹೇಳಿದ್ದರು. ಇದಕ್ಕೆ ಜೈನ ಧರ್ಮದವರು ವಿರೋಧ ವ್ಯಕ್ತಪಡಿಸಿ ಆಕ್ರೋಶ ಹೊರಹಾಕಿದ್ದರು.

ಇದನ್ನೂ ಓದಿ: ಕಾಂಗ್ರೆಸ್ ಅವಧಿಯಲ್ಲೇ ಇಂದಿರಾ ಕ್ಯಾಂಟೀನ್ ಬಂದ್

ಹಂಸಲೇಖ ಅವರು ಸಾರ್ವಜನಿಕವಾಗಿ ಜೈನ ಧರ್ಮವನ್ನು ಹೀಯಾಳಿಸಿದ್ದು ಸರಿ ಅಲ್ಲ ಹಂಸಲೇಖ ಈಗಲೇ ಕ್ಷಮೆ ಕೇಳಬೇಕು ಎಂದು ಜೈನ ಧರ್ಮದವರು ಆಗ್ರಹಿಸಿದ್ದರು. ಈಗ ಹಂಸಲೇಖ ಅವರು ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದಾರೆ. ಜೊತೆಗೆ ಇದು ಬಾಯ್ತಪ್ಪಿನಿಂದ ಆಡಿರೋ ಮಾತು ಎಂದಿರೋ ಅವರು, ಇನ್ಮುಂದೆ ಈ ರೀತಿಯ ತಪ್ಪನ್ನು ಮಾಡುವುದಿಲ್ಲ ಎನ್ನುವ ಭರವಸೆ ನಿಡಿದ್ದಾರೆ.

ದಯಮಾಡಿ ಕ್ಷಮಿಸಿ. ನಾನು ಯಾವತ್ತೂ ಅದರ ವಿರುದ್ಧ ಮಾತನಾಡಬೇಕು ಎಂದು ಯೋಚನೆ ಮಾಡಿದವನಲ್ಲ. ಆ ಪದವನ್ನು ಬಳಕೆ ಮಾಡಬೇಕು ಎಂದು ಕೂಡ ನಾನು ಅಂದುಕೊಂಡಿಲ್ಲ. ನಾನಿದ್ದ ಜಾಗದಲ್ಲಿ ಎಲ್ಲರೂ ಎಳೆದಾಡುತ್ತಿದ್ದರು. ಅವರಿಗೆ ಗದರೋಕೆ ಹೋಗಿ ಈಕಡೆ ಬಂದೆ. ಆ ಮಾತು ಬಂದಿದ್ದು ತಪ್ಪಾಯ್ತು. ಇನ್ನು ಎಂದಿಗೂ ಆ ಮಾತನ್ನು ಆಡಲ್ಲ ಎಂದಿದ್ದಾರೆ.

RELATED ARTICLES

Related Articles

TRENDING ARTICLES