Tuesday, September 17, 2024

ಭಾರೀ ಮಳೆ; 11 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯಾಗಲಿದ್ದು, ಮುಂಜಾಗ್ರತಾ ದೃಷ್ಟಿಯಿಂದ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ದರ್ಶನ್​ ಅವರು ತೂಕದಲ್ಲಿ ಕಮ್ಮಿಯಾದಂತೆ ಕಾಣುತ್ತಿದ್ದಾರೆ: ತರುಣ್ ಸುಧೀರ್

ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದೆಡೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಯಾಗಲಿದೆ. ಮಲೆನಾಡು ಜಿಲ್ಲೆಯಾದ್ಯಂತ ಭಾರೀ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

RELATED ARTICLES

Related Articles

TRENDING ARTICLES