Sunday, September 8, 2024

ಉತ್ತರ ಕನ್ನಡದ ಗುಡ್ಡ ಕುಸಿತ: ನೊಂದ ಕುಟುಂಬಗಳ ಜತೆ ಸರ್ಕಾರ ನಿಲ್ಲಬೇಕು-HDK

ಕಾರವಾರ: ರಾಜ್ಯ ಸರಕಾರವು ಗುಡ್ಡ ಕುಸಿತದಲ್ಲಿ ಜೀವ ಕಳೆದುಕೊಂಡಿರುವ ಕುಟುಂಬಗಳ ಜತೆ ನಿಲ್ಲಬೇಕು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ರಾಷ್ಟ್ತ್ರೀಯ ಹೆದ್ದಾರಿಯ ಶಿರೂರು ಗ್ರಾಮದ ಬಳಿ ಗುಡ್ಡ ಕುಸಿದು ಏಳು ಜನರು ಧಾರುಣ ಸಾವನ್ನಪ್ಪಿದ್ದೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾದ್ಯಮದವರೊಂದಿಗೆ ಅವರು ಮಾತನಾಡಿದರು,

ಪರಿಹಾರ ಕಾರ್ಯದಲ್ಲಿ ರಾಜಕರಣ ಮಾಡಬಾರದು. ಕೇಂದ್ರ ಸರಕಾರವು ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ರಾಜ್ಯ ಸರ್ಕಾರವು ತನ್ನ ಪಾಲಿನ ಕೆಲಸವನ್ನು ಮಾಡಬೇಕು. ರಾಜಕೀಯದಿಂದ ಉಪಯೋಗ ಇಲ್ಲ. ನೊಂದ ಕುಟುಂಬಗಳಿಗೆ ದೊಡ್ಡ ಪ್ರಮಾಣದಲ್ಲಿ ಪರಿಹಾರ ಕೊಡಬೇಕು ಹಾಗೂ ಮನೆಗಳನ್ನು ಕಳೆದುಕೊಂಡವರಿಗೆ ಮರು ವಸತಿ ಕಲ್ಪಿಸಬೇಕು ಎಂದು ಎಂದರು.

ಇದನ್ನೂ ಓದಿ: ನಂಜನಗೂಡು ನಂಜುಡೇಶ್ವರನಿಗೆ ಜಲದಿಗ್ಭಂಧನ!

ಒಂದೇ ಕುಟುಂಬದಲ್ಲಿ ಐವರು, ಇನ್ನೂ ಇಬ್ಬರು ಈ ದುರಂತದಲ್ಲಿ ಜೀವ ಕಳೆದುಕೊಂಡಿರುವುದು ಅತ್ಯಂತ ನೋವಿನ ಸಂಗತಿ. ಎಲ್ಲರೂ ಶ್ರಮ ಜೀವಿಗಳು. ಇಬ್ಬರು ಮಕ್ಕಳು ಬಲಿಯಾಗಿರುವುದು ದುಃಖ ತಂದಿದೆ ಎಂದು ಕೇಂದ್ರ ಸಚಿವರು ಹೇಳಿದರು.

ಯಾಕೆ ಈ ದುರಂತ ಸಂಭವಿಸಿತು? ಅದಕ್ಕೆ ಕಾರಣಗಳು ಏನು? ಕಾಮಗಾರಿಯಲ್ಲಿ ಸಮಸ್ಯೆ ಇದೆಯಾ? ಎಂಬ ಪರಿಶೀಲನೆ ನಡೆಸಲಾಗುವುದು ಹಾಗೂ ಸಂಬಂಧಪಟ್ಟ ಸಚಿವರ ಗಮನಕ್ಕೂ ತರಲಾಗುವುದು. ಮೊದಲು ಪರಿಹಾರ ಕಾರ್ಯ ಮುಗಿಯಲಿ. ಇದರಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಅವರು ಮನವಿ ಮಾಡಿದರು.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಜೆಡಿಎಸ್ ನಾಯಕ ಸೂರಜ್ ನಾಯಕ್ ಸೋನಿ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ ಜೆಡಿಎಸ್ ಮುಖಂಡರು ಸಚಿವರ ಜತೆಯಲ್ಲಿ ಇದ್ದರು.

RELATED ARTICLES

Related Articles

TRENDING ARTICLES