Sunday, September 8, 2024

ಕಾಂಗ್ರೆಸ್ ಅವಧಿಯಲ್ಲೇ ಇಂದಿರಾ ಕ್ಯಾಂಟೀನ್ ಬಂದ್

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಬೆಂಗಳೂರಿನಲ್ಲಿ 15 ಕ್ಕೂ ಹೆಚ್ಚು ಇಂದಿರಾ ಕ್ಯಾಂಟೀನ್‌ಗಳು ಬಂದ್ ಆಗಿವೆ.

2013ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಯಾದ ಇಂದಿರಾ ಕ್ಯಾಂಟೀನ್ ಬಡವರು, ಕೂಲಿ ಕಾರ್ಮಿಕರು, ನಿರಾಶ್ರಿತರು ಸೇರಿದಂತೆ ಅನೇಕರ ಹಸಿದ ಹೊಟ್ಟೆ ತುಂಬಿಸಿತ್ತು. ಅಲ್ಲದೇ ಇತರ ರಾಜ್ಯಗಳಿಗೂ ಈ ಯೋಜನೆ ಸ್ಫೂರ್ತಿ ಆಗಿತ್ತು. ಆದರೆ ಈಗ ಬೆಂಗಳೂರು ದಕ್ಷಿಣದಲ್ಲಿ ಈ ಯೋಜನೆ ಸಂಪೂರ್ಣ ಹಳ್ಳ ಹಿಡಿಯುವಂತಾಗಿದೆ.

ಇದನ್ನೂ ಓದಿ: ಭಾರೀ ಮಳೆ; 11 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

ಕಳೆದ ಒಂದು ವರ್ಷದಿಂದ ಬಾಕಿ ಹಣ ಪಾವತಿ ಮಾಡಿಲ್ಲ ಎಂದು ಆಹಾರ ಪೂರೈಕೆಯ ಟೆಂಡರ್ ಪಡೆದಿದ್ದ ಶೆಫ್ ಟಾಕ್ ಸಂಸ್ಥೆ ಆಹಾರ ಪೂರೈಸುತ್ತಿಲ್ಲ. ಇದರಿಂದ ಪಾಲಿಕೆಯ ದಕ್ಷಿಣ ವಲಯಕ್ಕೆ ಬರುವ 11ಕ್ಕೂ ಹೆಚ್ಚು ಇಂದಿರಾ ಕ್ಯಾಂಟೀನ್‌ಗಳು ಕಳೆದ 15-20 ದಿನಗಳಿಂದ ಬಾಗಿಲು ಬಂದ್ ಮಾಡಿವೆ. ಇತ್ತ ಬಿಬಿಎಂಪಿ ವ್ಯಾಪ್ತಿಯಲ್ಲಿ 174 ಸ್ಥಿರ ಹಾಗೂ 24 ಮೊಬೈಲ್ ಕ್ಯಾಂಟಿನ್‌ಗಳಿವೆ. ಶುರುವಾದಾಗಿನಿಂದ ಪ್ರತಿ ನಿತ್ಯ ಮೂರೂವರೆ ಲಕ್ಷ ಜನ ಊಟ, ತಿಂಡಿ ಮಾಡುತ್ತಿದ್ದರು.

ಕಳೆದ ಒಂದು ವರ್ಷದಿಂದ ಕಂಪನಿಗೆ ಪಾಲಿಕೆ 40 ಕೋಟಿ ಹಣ ನೀಡಬೇಕಿದೆ. ಕ್ಯಾಂಟೀನ್ ಸಿಬ್ಬಂದಿ ಸಂಬಳ, ದಿನಸಿ ಬಿಲ್ ಸಮಸ್ಯೆಯಿಂದಾಗಿ ಟೆಂಡರ್ ಪಡೆದ ಸಂಸ್ಥೆ ಕ್ಯಾಂಟೀನ್‌ಗೆ ಬೀಗ ಹಾಕಿದೆ. ಬಸವನಗುಡಿ, ಪದ್ಮನಾಭನಗರ, ಚಿಕ್ಕಪೇಟೆ, ಜಯನಗರ ಕ್ಷೇತ್ರಗಳಲ್ಲಿ ಕ್ಯಾಂಟೀನ್‌ಗಳಿಗೆ ಬೀಗ ಹಾಕಲಾಗಿದೆ. ಇತ್ತ ಬಿಬಿಎಂಪಿಯ ಅಧಿಕಾರಿಗಳನ್ನ ಕೇಳಿದ್ರೆ ಎಲ್ಲವನ್ನೂ ಸರಿಪಡಿಸ್ತೀವೆ ಅಂತಾ ಸಬೂಬು ನೀಡ್ತಿದ್ದಾರೆ.

RELATED ARTICLES

Related Articles

TRENDING ARTICLES