Sunday, September 29, 2024

ದರ್ಶನ್‌ ಗ್ಯಾಂಗ್‌ನ ನಾಲ್ಕನೇ ಆರೋಪಿ ರಘು ತಾಯಿ ನಿಧನ!

ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ರಘು ಪರಪ್ಪನ ಅಗ್ರಹಾರದ ಜೈಲುಪಾಲಾಗಿದ್ದು ಮಗನ ಕೊರಗಿನಲ್ಲಿ ಆತನ ತಾಯಿ ಮೃತಪಟ್ಟಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಅರೆಸ್ಟ್ ಆಗುವುದರ ಜೊತೆಗೆ ಇನ್ನೂ ಅನೇಕರು ಬಂಧನಕ್ಕೆ ಒಳಗಾಗಿದ್ದಾರೆ. ಈ ಮೊದಲು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಬಂಧನಕ್ಕೆ ಒಳಗಾದ ಅನಿಲ್ ಕುಮಾರ್ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದರು. ಈಗ ಎ4 ರಘು ತಾಯಿ ಮಂಜುಳಮ್ಮ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಜೈಲಿನಲ್ಲಿ ನಟೋರಿಯಸ್​ ರೌಡಿ ಬರ್ತಡೆ ಆಚರಿಸಿದ ದರ್ಶನ್, ಬ್ಯಾರಕ್​ನಲ್ಲೇ ಭರ್ಜರಿ ಬಾಡೂಟ

ರಘು ಅವರು ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿದ್ದಾರೆ. ಇವರು ದರ್ಶನ್ ಅಭಿಮಾನಿ ಸಂಘದ ಚಿತ್ರದುರ್ಗ ಜಿಲ್ಲೆಯ ಅಧ್ಯಕ್ಷರಾಗಿದ್ದಾರೆ. ರೇಣುಕಾ ಸ್ವಾಮಿಯನ್ನು ಪತ್ತೆ ಹಚ್ಚಿ ಬೆಂಗಳೂರಿಗೆ ಕರೆತಂದಿದ್ದು ಇದೇ ರಘು. ಈ ಕಾರಣದಿಂದಲೇ ರಘು ಅವರನ್ನು ಎ4 ಆರೋಪಿಯನ್ನಾಗಿ ಮಾಡಲಾಗಿದೆ. ಈಗ ಅವರು ನ್ಯಾಯಾಂಗ ಬಂಧನದಲ್ಲಿ ಇರುವಾಗಲೇ ಅವರ ತಾಯಿ ಮೃತಪಟ್ಟಿದ್ದಾರೆ.

ರಘು ತಾಯಿ ಮಂಜುಳಮ್ಮ ಕಳೆದ 1 ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿತ್ರದುರ್ಗದ ಕೋಳಿಬುರುಜನಹಟ್ಟಿ ಮನೆಯಲ್ಲಿ ಮಂಜುಳಮ್ಮ ಮೃತಪಟ್ಟಿದ್ದಾರೆ. ಅಂತ್ಯಸಂಸ್ಕಾರಕ್ಕೆ ಪುತ್ರ ರಘುನನ್ನು ಕರೆತರಲು ಕುಟುಂಬಸ್ಥರ ಮನವಿ ಮಾಡಿಕೊಂಡಿದ್ದಾರೆ.

RELATED ARTICLES

Related Articles

TRENDING ARTICLES