Sunday, September 8, 2024

ಘಾಟಿ ಸುಬ್ರಹ್ಮಣ್ಯದಲ್ಲಿ ವೈಭವಪೂರಿತ ಗುರುಪೂರ್ಣಿಮೆ ಆಚರಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ಎಸ್ ಎಸ್ ಘಾಟಿರಸ್ತೆಯಲ್ಲಿರುವ ಸಾಯಿಬಾಬಾ ಮಂದಿರದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಗುರುಪೂರ್ಣಿಮೆಯನ್ನು ವೈಭವದಿಂದ ಆಚರಣೆ ಮಾಡಲಾಗುತ್ತಿದೆ. ಗುರುಪೂರ್ಣಿಮೆಗೂ ಮುನ್ನ ಮೂರು ದಿನ ಮುಂಚಿತವಾಗಿಯೇ ಸಿದ್ಧತೆ ಮಾಡಿದ್ದು, ಮಂದಿರವು ವಿವಿಧ ಪುಷ್ಪ, ವಿದ್ಯುತ್‌ ದೀಪಗಳಿಂದ ಕಂಗೊಳಿಸುತ್ತಿದೆ.

ಗುರುಪೂರ್ಣಿಮೆ ಆಚರಣೆ ಪ್ರಯುಕ್ತ ವಿವಿಧ ಪೂಜೆ. ಅಭಿಷೇಕ, ಭಜನೆ, ಪ್ರಸಾದ ಸೇರಿದಂತೆ ಸಕಲ ವ್ಯವಸ್ಥೆ ಮಾಡಲಾಗಿತ್ತು. ಶಿರಡಿ ಸಾಯಿಬಾಬಾಬಾ ಮಂದಿರ ಭಕ್ತರ ಆರಾಧನೆಯ ಕೇಂದ್ರವಾಗಿದೆ.

ಇದನ್ನೂ ಓದಿ: ಮುಂದಿನ 5 ದಿನ ರಾಜ್ಯದಲ್ಲಿ ವರುಣಾರ್ಭಟ ಫಿಕ್ಸ್

ಇನ್ನೂ ಪ್ರತಿ ಗುರುವಾರ, ಗುರುಪೂರ್ಣಿಮೆ ಮತ್ತು ಹಬ್ಬದ ದಿನಗಳಲ್ಲಿ ಸಾವಿರಾರು ಭಕ್ತರು ಈ ಮಂದಿರಕ್ಕೆ ಬಂದು ಶಿರಡಿ ಸಾಯಿಬಾಬಾ ದರ್ಶನ ಪಡೆದು, ಪ್ರಸಾದ ಸ್ವೀಕರಿಸಿ ಕೃತಾರ್ಥ ಭಾವನೆ ಹೊಂದುತ್ತಾರೆ. ಮಂದಿರಕ್ಕೆ ಬರುವ ಭಕ್ತರಿಗೆ ಸಕಲ ಅನುಕೂಲತೆ ಕಲ್ಪಿಸಿದೆ.

ಇದೇ ವೇಳೆ ಶ್ರೀ ಸಾಯಿವಿನಯ ವಿಶ್ವಧಾಮದಲ್ಲಿರು ಶ್ರೀ ಶಿರಡಿ ಸಾಯಿಬಾಬಾ ದೇವಾಲಯದಲ್ಲಿ ಗುರೂ ಪೂರ್ಣಿಮಾ ಅಂಗವಾಗಿ ವಿಶೇಷ ಹೋಮ ಹವನಗಳು ನಡೆದವು. ಆಚಾರ್ಯ ವಿನಯ್ ವಿನೇಕರ್ ಭಾಗವಹಿಸಿ ಭಕ್ತಾದಿಗಳಿಗೆ ಪ್ರವಚನ ನೀಡಿದರು.

RELATED ARTICLES

Related Articles

TRENDING ARTICLES