Tuesday, September 17, 2024

ಕೇಂದ್ರ ಬಜೆಟ್​: ಇಂದು 7ನೇ ಬಾರಿಗೆ ನಿರ್ಮಲಾ ಸೀತಾರಾಮನ್​ ಬಜೆಟ್​ ಮಂಡನೆ

ನವದೆಹಲಿ: ಮೋದಿ 3.0 ಸರ್ಕಾರದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರು ಇಂದು ಬಜೆಟ್​ ಮಂಡನೆ ಮಾಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ 2024-25ನೇ ಹಣಕಾಸು ವರ್ಷದ ಕೇಂದ್ರ ಬಜೆಟ್​ ಅನ್ನು ಮಂಡಿಸಲಿದ್ದಾರೆ.

ಇದನ್ನೂ ಓದಿ: ನನ್ನ ಮತ್ತು ವಿರಾಟ್​​ ಕೊಹ್ಲಿ ಸಂಬಂಧ ಕೇವಲ ಟಿಆರ್​ಪಿಗಾಗಿ ಅಲ್ಲ : ಗೌತಮ್​ ಗಂಭೀರ್​

2024ರ ಫೆಬ್ರುವರಿಯಲ್ಲಿ ಮಂಡಿಸಿದ ಮಧ್ಯಂತರ ಬಜೆಟ್ ಸೇರಿ ನಿರ್ಮಲಾ ಅವರು ಈವರೆಗೆ 6 ಬಾರಿ ಬಜೆಟ್ ಮಂಡಿಸಿದ್ದಾರೆ. ಇಂದು (ಮಂಗಳವಾರ) ಸತತ ಏಳನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ಸಂಪ್ರದಾಯದಂತೆ ಬಜೆಟ್ ಮಂಡನೆಯ ಒಂದು ದಿನದ ಮೊದಲು ಸಂಸತ್ತಿನಲ್ಲಿ ಆರ್ಥಿಕ ಸಮೀಕ್ಷೆಯ ವರದಿಯನ್ನು ಮಂಡಿಸಲಾಗಿದೆ.

ರಾಜ್ಯಗಳು ಕೇಂದ್ರ ಬಜೆಟ್​ ಮಂಡನೆ ಮೇಲೆ ಭಾರಿ ನಿರೀಕ್ಷೆ ಹೊಂದಿದ್ದು ಮೂಲಭೂತ ಸೌಕರ್ಯಗಳು ಸೇರಿದಂತೆ ಹಲವು ಕ್ಷೇತ್ರಗಳು ಅನುದಾನದ ನಿರೀಕ್ಷೆಯಲ್ಲಿದೆ.

RELATED ARTICLES

Related Articles

TRENDING ARTICLES