Sunday, September 8, 2024

Union Budget 2024: ವಿತ್ತಸಚಿವೆ ನಿರ್ಮಲಾ ಸೀತಾರಾಮನ್​ಗೆ ಸಿಹಿ ತಿನಿಸಿ ಶುಭಕೋರಿದ ರಾಷ್ಟ್ರಪತಿ

ನವದೆಹಲಿ: ಮೋದಿ 3.0 ಸರ್ಕಾರದ ಮೊದಲ ಬಜೆಟ್​ ಹಾಗು ವಿತ್ತಸಚಿವೆ ನಿರ್ಮಲಾ ಸೀತಾರಾಮನ್​ ಏಳನೆ ಬಾರಿಗೆ ಬಜೆಟ್​ ಮಂಡಲಿದ್ದು ಬಜೆಟ್​ ಮಂಡನೆಗೂ ಮುನ್ನ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಾಷ್ಟ್ರಪತಿ ಬ್ರೌಪದಿ ಮುರ್ಮು ಅವರಿಂದ ಬಜೆಟ್ ಮಂಡನೆಗೆ ಔಪಚಾರಿಕ ಒಪ್ಪಿಗೆ ಪಡೆದರು.

ಭೇಟಿಯ ವೇಳೆ ರಾಷ್ಟ್ರಪತಿ ಬ್ರೌಪದಿ ಮುರ್ಮು ಅವರು ನಿರ್ಮಲಾ ಸೀತಾರಾಮನ್ ಅವರಿಗೆ ಸಿಹಿ ಮೊಸರು ಶುಭ ಕೋರಿದರು. ಈ ವೇಳೆ ವೇಳೆ ಹಣಕಾಸು ಸಚಿವಾಲಯದ ಹಲವಾರು ಹಿರಿಯ ಅಧಿಕಾರಿಗಳು ರಾಷ್ಟ್ರಪತಿ ಭವನದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಕೇಂದ್ರ ಬಜೆಟ್​: ಇಂದು 7ನೇ ಬಾರಿಗೆ ನಿರ್ಮಲಾ ಸೀತಾರಾಮನ್​ ಬಜೆಟ್​ ಮಂಡನೆ

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11ನೇ ಪೂರ್ಣ ಪ್ರಮಾಣದ ಬಜೆಟ್ ಇದಾಗಿದ್ದು. ರಾಷ್ಟ್ರಪತಿಗಳ ಒಪ್ಪಿಗೆ ಬಳಿಕ ಸಂಸತ್ತಿನ ಕಡೆ ತೆರಳಲಿರುವ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆಗೂ ಮುನ್ನ ಸಂಪುಟ ಸಭೆಯಲ್ಲಿ ಬಜೆಟ್‌ಗೆ ಅನುಮೋದನೆ ಪಡೆಯಲಿದ್ದಾರೆ. ಇದಾದ ನಂತರ ಬೆಳಗ್ಗೆ 11 ಗಂಟೆಗೆ ಬಜೆಟ್ ಮಂಡನೆ ಆರಂಭಿಸಲಿದ್ದಾರೆ.

RELATED ARTICLES

Related Articles

TRENDING ARTICLES