Saturday, September 7, 2024

ಬಜೆಟ್​ನಲ್ಲಿ ರಾಜ್ಯಗಳಿಗೆ ತಾರತಮ್ಯ: ಸಂಸತ್​ ಮುಂದೆ ಪ್ರತಿಭಟನೆ

ನವದೆಹಲಿ: ಮಂಗಳವಾರ ಸಂಸತ್​ ಸದನದಲ್ಲಿ ಮಂಡನೆಯಾದ ಕೇಂದ್ರ ಬಜೆಟ್​​ನಲ್ಲಿ ಬಿಜೆಪಿ ಅಧಿಕಾರದಲ್ಲಿಲ್ಲದ ರಾಜ್ಯಗಳಿಗೆ ಬಜೆಟ್​ನಲ್ಲಿ ತಾರತಮ್ಯ ಮಾಡಲಾಗಿದೆ ಎಂದು INDIA ಬಣದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ. ಸೋನಿಯಾ ಗಾಂಧಿ ಸೇರಿದಂತೆ ಹಲವು ನಾಯಕರು ಇಂದು ಸಂಸತ್ತಿನ ಎದುರು ಬುಧವಾರ ಧರಣಿ ನಡೆಸಿದರು.

ಇದನ್ನೂ ಓದಿ: ಸಿಎಂಗೆ ಬಂಧನ ಭೀತಿ, ಡಿಕೆಶಿಗೆ ಗಂಢಾಂತರ, ರೇವಣ್ಣಗೆ ರಿಲೀಫ್​: ಶ್ರೀಗಳ ಕಾಲಜ್ಞಾನ ಭವಿಷ್ಯ

ಈ ಕುರಿತು ಮಾತನಾಡಿದ ಖರ್ಗೆ, ಈ ಬಜೆಟ್ ಜನ ವಿರೋಧಿಯಾಗಿದೆ. ಇದರಿಂದ ಯಾರಿಗೂ ನ್ಯಾಯ ದೊರೆತಿಲ್ಲ. ವಿಶೇಷ ಪ್ಯಾಕೇಜ್ ಬಗ್ಗೆ ಹೇಳಿದರೇ ಹೊರತು. ರಾಜ್ಯಗಳಿಗೆ ನೀಡುವ ವಿಶೇಷ ಸ್ಥಾನಮಾನದ ಬಗ್ಗೆ ಉಲ್ಲೇಖಿಸಲೇ ಇಲ್ಲ. ಇದೊಂದು ವಂಚನೆಯ ಬಜೆಟ್ ಆಗಿದ್ದು, ಜನರಿಗೆ ಅನ್ಯಾಯವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಒಕ್ಕೂಟ ಸರ್ಕಾರವನ್ನು ಉಳಿಸಿಕೊಳ್ಳಲು ಕೇಂದ್ರ ಬಜೆಟ್ ಮೂಲಕ ಎಲ್ಲಾ ತತ್ವಗಳನ್ನು ಉಲ್ಲಂಘಿಸಿದೆ. ಸರ್ಕಾರವನ್ನು ರಕ್ಷಿಸಿಕೊಳ್ಳುವುದು ಬಜೆಟ್‌ನ ಉದ್ದೇಶವಾಗಿತ್ತು. ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಅನುದಾನ ನೀಡುವುದನ್ನು ನಾವು ವಿರೋಧಿಸುವುದಿಲ್ಲ. ಆದರೆ ಇತರ ರಾಜ್ಯಗಳಿಗೂ ನ್ಯಾಯ ಸಿಗಬೇಕು. ಅದಕ್ಕಾಗಿಯೇ ನಾವು ಈ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಹೇಳಿದರು.

RELATED ARTICLES

Related Articles

TRENDING ARTICLES