Sunday, September 8, 2024

ಗ್ರೇಟರ್​ ಬೆಂಗಳೂರು ವಿಧೇಯಕ ಅಂಗೀಕಾರಕ್ಕೆ ಸದನದಲ್ಲಿ ವಿರೋಧ!

ಬೆಂಗಳೂರು: ಉಪಮುಖ್ಯಮಂತ್ರಿ ಹಾಗು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಅವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗ್ರೇಟರ್​ ಬೆಂಗಳೂರು ಪ್ರಾಧಿಕಾರ ಆಡಳಿತ ವಿಧೇಯಕ 2024ಕ್ಕೆ ಸದನದಲ್ಲಿ ವಿರೋಧ ವ್ಯಕ್ತವಾಗಿದೆ.

ಸದನದಲ್ಲಿ ಗ್ರೇಟರ್ ಬೆಂಗಳೂರು ವಿಧೇಯಕ ಅಂಗೀಕಾರಕ್ಕೆ ಮುಂದಾಗಲಾಗಿತ್ತು. ಆದರೆ ಇದಕ್ಕೆ ವಿರೋಧ ಪಕ್ಷದಿಂದ ವಿರೋಧ ವ್ಯಕ್ತವಾಯಿತು. ಬೆಂಗಳೂರಿಗೆ ಆರ್ಥಿಕ‌ ಶಕ್ತಿ ಕೊಡಬೇಕಿದೆ. ಹೀಗಾಗಿ ಗ್ರೇಟರ್ ಬೆಂಗಳೂರು ಮಸೂದೆ ಬಗ್ಗೆ ಬೆಳಕು ಚೆಲ್ಲಬೇಕಿದೆ. ಹಾಗಾಗಿ ಚರ್ಚೆಗೆ ಅವಕಾಶ ಕೊಡಬೇಕು ಎಂದು ಡಿಕೆ ಶಿವಕುಮಾರ್ ಮನವಿ ಮಾಡಿದರು. ಆದರೇ ಈ ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸದನ ಸಮಿತಿ ರಚನೆ ಮಾಡಲು ನಿರ್ಧಾರ ಮಾಡಲಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ NEET ಪರೀಕ್ಷೆ ರದ್ದು: ವಿಧಾನಸಭೆಯಲ್ಲಿ ಮಹತ್ವದ ನಿರ್ಣಯ ಅಂಗೀಕಾರ

ಈ ವಿಧೇಯಕದ ಬಗ್ಗೆ ಸುದೀರ್ಘ ಚರ್ಚೆ ನಡೆಸಬೇಕಾಗಿದೆ. ಹಾಗಾಗಿ ಇವಾಗ ಪರ್ಯಾಲೋಚನೆ ಮಾಡಬಾರದು. ಇದಕ್ಕೆ ಒಂದು ಸದನ ಸಮಿತಿಯನ್ನು ರಚಿಸಬೇಕು. ಸಮಗ್ರವಾಗಿ ಇದರ ಬಗ್ಗೆ ಚರ್ಚೆಯಾಗಬೇಕು ಎಂದು ಆರ್ ಅಶೋಕ್ ವಿರೋಧ ವ್ಯಕ್ತಪಡಿಸಿದರು.

RELATED ARTICLES

Related Articles

TRENDING ARTICLES