Sunday, September 8, 2024

ಇಂದು ಪ್ಯಾರಿಸ್​ ಒಲಿಂಪಿಕ್ಸ್​ಗೆ ಅಧಿಕೃತ ಚಾಲನೆ: ಭಾರತದ ಧ್ವಜಧಾರಿಯಾಗಿ ಪಿ.ವಿ ಸಿಂಧು ಪಥಸಂಚಲನ

ಪ್ಯಾರಿಸ್​: ಪ್ರತಿಷ್ಠಿತ ಪ್ಯಾರಿಸ್​ ಒಲಿಂಪಿಕ್ಸ್​ ಕ್ರೀಡಾಕೂಟದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಫ್ರಾನ್ಸ್​ನ ಮಹಾನದಿ ಸೀನ್ ಮೇಲೆ ಉದ್ಘಾಟನಾ ಸಮಾರಂಭ ನಡೆಯಲಿದೆ.

ಭಾರತದ ಧ್ವಜಧಾರಿಯಾಗಿ ಅವಳಿ ಒಲಿಂಪಿಕ್ಸ್​ ಪದಕ ವಿಜೇತೆ ಪಿ.ವಿ ಸಿಂಧು ಅವರು ಟೇಬಲ್ ಟೆನಿಸ್ ಪಟು ಶರತ್ ಕಮಾಲ್ ಜತೆ ಭಾರತದ ಧ್ವಜ ಹಿಡಿದು ಪಥಸಂಚಲನದಲ್ಲಿ ಸಾಗಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾರತ ತಂಡ 84ನೇ ರಾಷ್ಟ್ರವಾಗಿ ಈ ಬಾರಿ ಕಾಣಿಸಿಕೊಳ್ಳಲಿದೆ.

ಇದನ್ನೂ ಓದಿ: ಕೋಹ್ಲಿಯಂತ ದಿಗ್ಗಜ ಆಟಗಾರ ಮನೀಶ್ ಪಾಂಡೆಗೆ ಇದೇ ಕೊನೆಯ ಪ್ರಯಾಣವಾದರೂ ಅಚ್ಚರಿಯಲ್ಲ!

ಫ್ರಾನ್ಸ್‌ ಕಾಲಮಾನದಂತೆ ಸಾಯಂಕಾಲ 5.30ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. ಭಾರತದಲ್ಲಿ ರಾತ್ರಿ 11 ಗಂಟೆಗೆ ನೇರಪ್ರಸಾರವಾಗಲಿದೆ. ಪ್ಯಾರಿಸ್‌ ಒಲಿಂಪಿಕ್ಸ್‌ನ ಅಧಿಕೃತ ಪ್ರಸಾರ ಮತ್ತು ಡಿಜಿಟಲ್‌ ಪಾಲುದಾರರಾಗಿರುವ ವಯಾಕಾಮ್ 18 ಜಿಯೋ ಸಿನಿಮಾ ಮೂಲಕ ಒಲಿಂಪಿಕ್ಸ್‌ ಸ್ಪರ್ಧೆಯನ್ನು ನೇರಪ್ರಸಾರ ಮಾಡುತ್ತಿದೆ.

ಈ ಬಾರಿಯ ಒಲಿಂಪಿಯಾಡ್​ನಲ್ಲಿ 206 ದೇಶಗಳ 10 ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ. ಹಾಗೆಯೇ ಈ ಕ್ರೀಡಾಕೂಟದಲ್ಲಿ ಭಾರತದ 117 ಕ್ರೀಡಾಪಟುಗಳು ಕಣಕ್ಕಿಳಿಯುತ್ತಿರುವುದು ಭಾರತೀಯರಿಗೆ ಹೆಮ್ಮೆಯ ವಿಷಯ.

ಪ್ಯಾರಿಸ್ ಒಲಿಂಪಿಕ್ಸ್​ಗೆ ಇಂದು ಚಾಲನೆ; ವಿಶೇಷ ಡೂಡಲ್ ಮೂಲಕ ಸಂಭ್ರಮಿಸಿದ ಗೂಗಲ್‌:

33ನೇ ಒಲಿಂಪಿಕ್ಸ್ ಕ್ರೀಡಾಕೂಟಕ್ಕಾಗಿ ಪ್ಯಾರಿಸ್​ ಸಜ್ಜಾಗಿ ನಿಂತಿದೆ. ಉದ್ಘಾಟನಾ ಸಮಾರಂಭ ಇಂದು (ಜು. 26) ರಾತ್ರಿ 11 ಗಂಟೆಗೆ ಆರಂಭವಾಗಲಿದ್ದು, ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಇದೀಗ ಈ ಬಹುನಿರೀಕ್ಷಿತ ಕ್ರೀಡಾ ಜಾತ್ರೆಯನ್ನು ಗೂಗಲ್‌ ಡೂಡಲ್‌ ಸಂಭ್ರಮಿಸಿದೆ. ವಿಶೇಷ ಡೂಡಲ್​​​ ಮೂಲಕ ಪ್ಯಾರಿಸ್ ಒಲಿಂಪಿಕ್ಸ್​ಗೆ ಗೂಗಲ್​​​ ವಿಶೇಷ ಗೌರವ ನೀಡಿದೆ.

ಗೂಗಲ್​​ ಡೂಡಲ್​​​ ನದಿಯ ವಿನ್ಯಾಸದಲ್ಲಿ ಡೂಡಲ್​​ ಅನ್ನು ತಯಾರಿಸಿದೆ. ಡೂಡಲ್​​ ಮೇಲೆ ಕ್ಲಿಕ್​ ಮಾಡಿದರೆ, ಪ್ಯಾರಿಸ್ ಒಲಿಂಪಿಕ್ಸ್​ಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ನಿಮಗೆ ಸಿಗುವಂತೆ ವಿನ್ಯಾಸಗೊಳಿಸಲಾಗಿದೆ. ಆದರೆ ಗೂಗಲ್ ಡೂಡಲ್ ಡಿಸೈನರ್ ಹೆಸರನ್ನು ಬಹಿರಂಗಪಡಿಸಿಲ್ಲ.

RELATED ARTICLES

Related Articles

TRENDING ARTICLES