Sunday, September 8, 2024

ರಾಜ್ಯ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್​ ನೇಮಕ!

ಬೆಂಗಳೂರು: ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್​ ಅವರನ್ನು ನೇಮಕ ಮಾಡಲಾಗಿದೆ ಎಂದು ಸಚಿವ ಎಚ್​.ಕೆ ಪಾಟೀಲ್​ ಅವರರು ಮಾಹಿತಿ ನೀಡಿದ್ದಾರೆ.

ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ ಅವರ ಅಧಿಕಾರದ ಅವಧಿಯು ಜುಲೈ 31ಕ್ಕೆ ಮುಗಿಯುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಶಾಲಿನಿ ರಜನೀಶ್‌ ಅವರನ್ನು ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿದೆ. ಶಾಲಿನಿ ರಜನೀಶ್‌ ಅವರು ರಜನೀಶ್‌ ಗೋಯಲ್‌ ಅವರ ಪತ್ನಿಯೂ ಹೌದು.

ಇದನ್ನೂ ಓದಿ: ನನ್ನ ರಾಜಕೀಯ ಜೀವನ ತೆರೆದ ಪುಸ್ತಕ: ನನ್ನ ವ್ಯಕ್ತಿತ್ವಕ್ಕೆ ವಿಪಕ್ಷಗಳಿಂದ ಮಸಿ ಬಳಿಯುವ ಯತ್ನ: ಸಿಎಂ

ಶಾಲಿನಿ ರಜನೀಶ್‌ ಅವರು ಸದ್ಯ ಅಭಿವೃದ್ಧಿ ಆಯುಕ್ತೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಗ ಅವರಿಗೆ ಜ್ಯೇಷ್ಠತೆಯ ಆಧಾರದ ಮೇಲೆ ಮುಂಬಡ್ತಿ ನೀಡಲಾಗಿದೆ. ರಜನೀಶ್‌ ಗೋಯಲ್‌ ಅವರ ನಂತರ ಜ್ಯೇಷ್ಠತೆಯ ಆಧಾರದ ಮೇಲೆ ರೇಸ್‌ನಲ್ಲಿ ಕೇಂದ್ರ ಹಣಕಾಸು ಸಚಿವಾಲಯದ ಕಾರ್ಯದರ್ಶಿ ಅಜಯ್‌ ಸೇಠ್‌ ಹಾಗೂ ಶಾಲಿನಿ ರಜನೀಶ್‌ ಅವರಿದ್ದರು. ಈಗ ರಾಜ್ಯ ಸರ್ಕಾರವು ಶಾಲಿನಿ ರಜನೀಶ್‌ ಅವರಿಗೇ ಮಣೆ ಹಾಕಿದೆ. 2027ರ ಜೂನ್‌ಗೆ ಇವರು ನಿವೃತ್ತಿ ಹೊಂದಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸಚಿವ ಎಚ್‌.ಕೆ. ಪಾಟೀಲ್‌ ಅವರು ಶಾಲಿನಿ ರಜನೀಶ್‌ ಅವರ ನೇಮಕದ ಕುರಿತು ಮಾಹಿತಿ ನೀಡಿದರು. ರಜನೀಶ್‌ ಗೋಯಲ್‌ ಅವರ ಅಧಿಕಾರದ ಅವಧಿ ಮುಗಿದ ಕಾರಣ ಅವರನ್ನು ಬೀಳ್ಕೊಡಲಾಗುತ್ತದೆ. ಇನ್ನು, ರಾಜ್ಯದ ಮುಖ್ಯ ಕಾರ್ಯದರ್ಶಿಯನ್ನಾಗಿ ಶಾಲಿನಿ ರಜನೀಶ್‌ ಅವರನ್ನು ನೇಮಕ ಮಾಡಲಾಗಿದೆ ಎಂಬುದಾಗಿ ಅವರು ತಿಳಿಸಿದರು.

RELATED ARTICLES

Related Articles

TRENDING ARTICLES