Sunday, September 8, 2024

ಗಂಗಾವತಿ-ಕಂಪ್ಲಿ ಸೇತುವೆ ಸಂಚಾರ ನಿಷೇಧ

ಬಳ್ಳಾರಿ: ತುಂಗಭದ್ರಾ ನದಿ ತುಂಬಿ ಹರಿಯುತ್ತಿರುವ ಹಿನ್ನಲೆ ಮುನ್ನೆಚ್ಚರಿಕಾ ಕ್ರಮವಾಗಿ ಚಿಕ್ಕಜಂತಕಲ್ ಬಳಿ ಗಂಗಾವತಿ-ಕಂಪ್ಲಿ ಸೇತುವೆ ಮೇಲೆ ಸಂಚಾರವನ್ನು ಜಿಲ್ಲಾಡಳಿತ ನಿಷೇಧಿಸಿ ಆದೇಶ ಹೊರಡಿಸಿದೆ.

ತುಂಗಭದ್ರಾ ಡ್ಯಾಂನ 12 ಗೇಟ್​ಗಳನ್ನು ತೆರೆಯಲಾಗಿದ್ದು ಜಲಾಶಯದಿಂದ ಸದ್ಯ 82 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡಲಾಗಿದೆ. 90ರಿಂದ ಒಂದು ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಹರಿಬಿಟ್ಟಲ್ಲಿ ಕಂಪ್ಲಿ ಸೇತುವೆ ಸಂಪೂರ್ಣ ಮುಳುಗಡೆಯಾಗಲಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜನ ಮತ್ತು ವಾಹನ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಸಂಪೂರ್ಣ ಭರ್ತಿಯಾದ KRS: ಭಾರಿ ಪ್ರಮಾಣದಲ್ಲಿ ನೀರು ಹೊರಕ್ಕೆ

ತುಂಗಭದ್ರಾ ಜಲಾಶಯದಲ್ಲಿ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದಲ್ಲಿ ನದಿಗೆ ನೀರು ಹರಿಬಿಡಲಾಗಿದೆ. ತಹಶೀಲ್ದಾರ್ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಶಿಫಾರಸಿನ ಮೇರೆಗೆ ಮುಂದಿನ ಆದೇಶದವರೆಗೂ ವಾಹನ‌ ಮತ್ತು ಜನ ಸಂಚಾರ ಸಂಪೂರ್ಣವಾಗಿ ನಿಷೇಧಿಸಲಾಗಿದೆ.

RELATED ARTICLES

Related Articles

TRENDING ARTICLES