Sunday, September 8, 2024

ಕುರಿ ಮಾಂಸದ ಹೆಸರಲ್ಲಿ ನಾಯಿ ಮಾಂಸ ಸಾಗಾಟ ಆರೋಪ: ಹಿಂದುಪರ ಕಾರ್ಯಕರ್ತರು ಆಕ್ರೋಶ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ರೈಲ್ವೆ ನಿಲ್ದಾಣಕ್ಕೆ ಪ್ರತಿನಿತ್ಯ ಸಾವಿರಾರು ಕೆಜಿ ನಾಯಿ ಮಾಂಸ ಬರುತ್ತಿದ್ದು ಅದನ್ನು ಕುರಿ ಮಾಂಸದಲ್ಲಿ ಬೆರೆಸಲಾಗುತ್ತಿದೆ. ಇದನ್ನ ನಗರದಲ್ಲಿರುವ ಬಹುತೇಕ ಹೋಟೆಲ್​ಗಳಿಗೆ ಸರಬರಾಜು ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಈ ಸಂಬಂಧ ಶುಕ್ರವಾರ (ಜೂನ್ 26) ಸಂಜೆ ಹಿಂದೂ ಸಂಘಟನೆಯ ಕಾರ್ಯರ್ತರು ಪುನೀತ್ ಕೆರೆಹಳ್ಳಿ ನೇತೃತ್ವದಲ್ಲಿ ಕ್ರಾಂತಿವೀರ ಸಂಗೊಳ್ಳಿ ರೈಲು ನಿಲ್ದಾಣದಲ್ಲಿ ಜೈಪುರದಿಂದ ಬಂದ ರೈಲಿನ ಮೇಲೆ ದಾಳಿ ನಡೆಸಿ ಮಾಂಸ ತುಂಬಿದ್ದ ಚೀಲಗಳನ್ನು ತೆಗೆದು ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ: ರಾಮನಗರ ಜಿಲ್ಲೆ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಹೆಸರು ಬದಲಾವಣೆಗೆ ಸಂಪುಟ ಒಪ್ಪಿಗೆ

ಇದೇ ವೇಳೆ ಸ್ಥಳಕ್ಕಾಗಮಿಸಿದ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಇದು ನಾಯಿ ಮಂಸವಲ್ಲ, ಕುರಿ ಮಾಂಸ ಎಂದು ಹೇಳಿದರು. ಈ ವೇಳೆ ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಬಿಬಿಎಂಪಿ ಅಧಿಕಾರಿಗಳು ಮಾಂಸದ ಚೀಲಗಳು ಹಾಗೂ ಕೆಲವರನ್ನು ವಶಕ್ಕೆ ಪಡೆದಿದ್ದಾರೆ.

ಈ ವೇಳೆ ಮಾತನಾಡಿರುವ ಪುನೀತ್ ಕೆರೆಹಳ್ಳಿ, ಜೈಪುರದಿಂದ ಮಟನ್ ಅಂತ ಹೇಳಿ ಬೇರೆ ಮಾಂಸ ತಂದಿದ್ದಾರೆ. ಬೇರೆ ಮಾಂಸದ ಜೊತೆ ನಾಯಿ ಮಾಂಸವನ್ನೂ ತಂದಿದ್ದಾರೆ. ಇದು ರಸಲ್ ಮಾರ್ಕೆಟ್‌ಗೆ ಹೋಗುತ್ತದೆ. ಮಾಂಸ ತಂದು ಅದಕ್ಕೆ ಮೀನು ಎಂದು ಏಕೆ ಬೋರ್ಡ್ ಹಾಕಿದ್ದಾರೆ. ನಾಯಿ ಮಾಂಸವೇ ಇರಬೇಕು ಅನ್ನೋ ಅನುಮಾನವಿದೆ. ಬಿಬಿಎಂಪಿ ಅಧಿಕಾರಿಗಳು ಬರಬೇಕು. ಇಲ್ಲೇ ಮಾಂಸ ಸೀಜ್ ಮಾಡಬೇಕು. ಯಾವ ಮಾಂಸ ಅಂತಾ ಗೊತ್ತಾಗಬೇಕು. ಕನಿಷ್ಠ 4 ದಿನದ ಹಿಂದೆ ಕಟ್ ಮಾಡಿರುವ ಮಾಂಸವಿದು. ಇದನ್ನ ಐಸ್ ಬಾಕ್ಸ್‌ನಲ್ಲಿ ತಂದಿರುವುದಕ್ಕೆ ಅನುಮತಿ ಇದೆಯಾ ಇದರ ಬಗ್ಗೆ ಅನುಮಾನ ಇದೆ ಎಂದು ಆರೋಪಿಸಿದ್ದಾರೆ.

ಈ ಆರೋಪಕ್ಕೆ ಪ್ರತಿಕ್ರಿಯಿಸಿದ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್, ಪುನೀತ್ ಕೆರೆಹಳ್ಳಿ ರೋಲ್ ಕಾಲ್ ಮಾಡಲು ಬಂದಿದ್ದ. ರೋಲ್ ಕಾಲ್‌ಗೆ ಅವಕಾಶ ಕೊಟ್ಟಿಲ್ಲ ಎಂದು ಕುರಿ ಮಾಂಸದ ಜತೆ ನಾಯಿ ಮಾಂಸ ಬೆರೆಸಿದ ಆರೋಪ ಮಾಡಿದ್ದಾನೆ. ಇದು ಅಕ್ರಮ ಬ್ಯುಸಿನೆಸ್ ಅಲ್ಲ. ನಮ್ಮ ಬಳಿ ಎಲ್ಲ ಸರ್ಟಿಫಿಕೇಟ್ ಇದೆ. ಎಲ್ಲ ಬಾಕ್ಸ್​ಗಳಲ್ಲಿ ಕುರಿ ಮಾಂಸ ಮಾತ್ರವಿದೆ. ನಾವು 12 ವರ್ಷದಿಂದ ಈ ಬ್ಯುಸಿನೆಸ್ ಮಾಡುತ್ತಿದ್ದೇವೆ. ಅವರೇ ಬಾಕ್ಸ್ ತೆರೆದಿದ್ದಾರೆ, ಕುರಿ ಮಾಂಸ ನೋಡಿದ್ದಾರೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES