Sunday, September 8, 2024

ಬಿಜೆಪಿ ಪಾದಯಾತ್ರೆಗೆ ಕಾಂಗ್ರೆಸ್​ ಕೌಂಟರ್​ ಯಾತ್ರೆ ರದ್ದು: ಡಿಕೆ ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ಜುಲೈ 30ರಿಂದ ರಾಜ್ಯ ಬಿಜೆಪಿ ಪಕ್ಷವು ಬೆಂಗಳೂರಿನಿಂದ ಮೈಸೂರಿನ ವರೆಗೆ ಪಾದಯಾತ್ರೆ ನಡೆಸಲು ತೀರ್ಮಾನಿಸಿದ್ದು ಈ ಪಾದಯಾತ್ರೆಗೆ ಕೌಂಟರ್​ ಪಾದಯಾತ್ರೆ ಮಾಡಲು ಉದ್ದೇಶಿಸಿದ್ದ ಕಾಂಗ್ರೆಸ್​ ಪಕ್ಷವು ಸದ್ಯ ಈ ಕಾರ್ಯಕ್ರಮವನ್ನು ಕೈಬಿಟ್ಟಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಸ್ಪಷ್ಟನೆ ನೀಡಿದ್ದಾರೆ.

ನಗರದ ವಿಧಾನಸೌಧದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಅವರು ಬೇಕಾದರೇ ಪಾದಯಾತ್ರೆಯನ್ನು ಮಾಡಲಿ, ನಾವು ನಮ್ಮದೇ ಆದ ರೀತಿಯಲ್ಲಿ ಅದಕ್ಕೆ ತಿರುಗೇಟನ್ನು ನೀಡುತ್ತೇವೆ. ಬಿಜೆಪಿಯವರು ಮಾಡಲು ಉದ್ದೇಶಿಸಿರುವ ಪಾದಯಾತ್ರೆಯಲ್ಲಿ ಸದುದ್ದೇಶ ಇಲ್ಲ, ಬರೀ ರಾಜಕೀಯವಿದೆ ಎಂದು ಡಿ.ಕೆ.ಶಿವಕುಮಾರ್ ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ:ಕುರಿ ಮಾಂಸದ ಹೆಸರಲ್ಲಿ ನಾಯಿ ಮಾಂಸ ಸಾಗಾಟ ಆರೋಪ: ಹಿಂದುಪರ ಕಾರ್ಯಕರ್ತರು ಆಕ್ರೋಶ 

ದೇಶಕ್ಕೆ ಅಥವಾ ರಾಜ್ಯಕ್ಕೆ ಒಳ್ಳೆಯದಾಗುವುದಾರೇ ಪಾದಯಾತ್ರೆ ಮಾಡಲಿ, ಅದಕ್ಕೆ ನಮ್ಮ ತಕರಾರು ಏನೂ ಇಲ್ಲ. ಬಿಜೆಪಿಯವರು ಅದ್ಯಾವ ಪುರುಷಾರ್ಥಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದಾರೋ ಎನ್ನುವುದು ಸಾರ್ವಜನಿಕರಿಗೆ ಗೊತ್ತಿರುವ ವಿಚಾರ ಎಂದು ಉಪ ಮುಖ್ಯಮಂತ್ರಿಗಳು ಹೇಳಿದ್ದಾರೆ.
ಬಿಜೆಪಿಯವರು ಪಾದಯಾತ್ರೆ ಹೊರಡುವ ಮುನ್ನ ಅವರ ಅವಧಿಯಲ್ಲಾದ ಸಾಲುಸಾಲು ಹಗರಣಗಳ ಬಗ್ಗೆ ವಿವರಣೆಯನ್ನು ನೀಡಲಿ. ಯಡಿಯೂರಪ್ಪ ಅಥವಾ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಅಕ್ರಮ ನಡೆಯಿತೋ, ಯಾವ್ಯಾವ ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದರು ಎನ್ನುವುದನ್ನು ಜನತೆಗೆ ತಿಳಿಸಲಿ ಎಂದು ಡಿಕೆಶಿ ಹೇಳಿದ್ದಾರೆ.

RELATED ARTICLES

Related Articles

TRENDING ARTICLES