Sunday, September 8, 2024

ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಪುನೀತ್ ಕೆರೆಹಳ್ಳಿ ಬಂಧನ

ಬೆಂಗಳೂರು: ಬೆಂಗಳೂರಿಗೆ ನಾಯಿ ಮತ್ತು ಕುರಿ ಕಲಬೆರಕೆ ಮಾಂಸ ಸಾಗಾಟದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಬೆಂಗಳೂರಿನ ಕಾಟನ್​ಪೇಟೆ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಕುರಿ ಮಾಂಸದ ಹೆಸರಲ್ಲಿ ನಾಯಿ ಮಾಂಸ ಸಾಗಾಟ ಆರೋಪ: ಹಿಂದುಪರ ಕಾರ್ಯಕರ್ತರು ಆಕ್ರೋಶ

ಬೆಂಗಳೂರಿನ ಮೆಜೆಸ್ಟಿಕ್​ಗೆ ರಾಜಸ್ಥಾನದ ಜೈಪುರದಿಂದ ಆಮದಾಗುತ್ತಿದ್ದ ಕುರಿ ಮಾಂಸದಲ್ಲಿ ಕಲಬೆರಕೆ ಮಾಂಸ ಮಿಶ್ರಿತವಾಗಿದೆ ಎಂಬ ಆರೋಪ ಕೇಳಿ ಬಂದಿದೆ. ತಡರಾತ್ರಿ ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ ಬಂದ ಸುಮಾರು 50ಕ್ಕೂ ಹೆಚ್ಚು ಬಾಕ್ಸ್​ಗಳಲ್ಲಿ 4,500 ಕೆಜಿ ಮಾಂಸವಿತ್ತು. ಆದರೆ, ಕುರಿಯ ಮಾಂಸದೊಂದಿಗೆ ಬೇರೆ ಮಾಂಸವನ್ನ ಮಿಶ್ರಣ ಮಾಡಲಾಗಿದೆ ಎಂದು ಆರೋಪಿಸಿದ್ದ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರು ಬಾಕ್ಸ್​ಗಳನ್ನು ಹೊರಗೆ ತರುತ್ತಿದ್ದಂತೆ ತಡೆದಿದ್ದರು.

RELATED ARTICLES

Related Articles

TRENDING ARTICLES