Thursday, September 19, 2024

ತೆಲಂಗಾಣ ಸೇರಿ 10 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ

ದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಹಾರಾಷ್ಟ್ರ ಸೇರಿದಂತೆ 10 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಿಸಿ ಆದೇಶಿಸಿದ್ದಾರೆ. ಈ ಪೈಕಿ ಕರ್ನಾಟಕದ ಮಾಜಿ ಸಂಸದ, ಮಾಜಿ ಸಚಿವರಾದ ಸಿ.ಹೆಚ್​ ವಿಜಯ್ ಶಂಕರ್ ಅವರನ್ನು ಮೇಘಾಲಯದ ನೂತನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.

ಇದನ್ನೂ ಓದಿ: ಕರ್ನಾಟಕ- ಆಂಧ್ರ ಜನರ ಜೀವದಾತೆ ಈ ‘ತುಂಗಭದ್ರೆ’

ಜಾರ್ಖಂಡ್​ನ ಹಾಲಿ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಮಹಾರಾಷ್ಟ್ರಕ್ಕೆ ನೇಮಿಸಲಾಗಿದೆ. ಹರಿಬಾವ್ ಕಿಶನ್ ಬಾವ್ ಬಾಗಡೆ ಅವರನ್ನು ರಾಜಸ್ಥಾನಕ್ಕೆ , ಸಂತೋಷ್ ಕುಮಾರ್ ಗಂಗ್ವಾರ್ ಅವರನ್ನು ಜಾರ್ಖಂಡ್​ಗೆ ನೇಮಿಸಲಾಗಿದೆ. ರಾಮನ್​ ಡೇಕಾ ಅವರನ್ನು ಛತ್ತೀಸ್​ಗಢ ರಾಜ್ಯಪಾಲರಾಗಿ, ಜಿಷ್ಣು ದೇವ್ ವರ್ಮಾ ಅವರನ್ನು ತೆಲಂಗಾಣದ ರಾಜ್ಯಪಾಲರಾಗಿ, ಓಂ ಪ್ರಕಾಶ್ ಮಾಥುರ್ ಅವರನ್ನು ಸಿಕ್ಕಿಂ ರಾಜ್ಯಪಾಕರಾಗಿ ನೇಮಿಸಲಾಗಿದೆ.

ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಕೈಲಾಸನಾಥನ್ ನೇಮಕಗೊಂಡಿದ್ದಾರೆ. ಅಸ್ಸಾಂನ ಹಾಲಿ ರಾಜ್ಯಪಾಲರಾದ ಗುಲಾಬ್ ಚಂದ್ ಕಟಾರಿಯಾ ಅವರನ್ನು ಪಂಜಾಬ್ ರಾಜ್ಯಪಾಲರಾಗಿ, ಜೊತೆಗೆ ಚಂಡೀಗಢ ಕೇಂದ್ರಾಡಳಿತ ಪ್ರದೇಶದ ಆಡಳಿತಾಧಿಕಾರಿಯಾಗಿ ನೇಮಿಸಲಾಗಿದೆ. ಅಸ್ಸಾಂಗೆ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರನ್ನು ನೇಮಿಸಿದ್ದು, ಇವರಿಗೆ ಮಣಿಪುರದ ರಾಜ್ಯಪಾಲರಾಗಿಯೂ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ.

RELATED ARTICLES

Related Articles

TRENDING ARTICLES