ಮೈಸೂರು: ಪೋಲೀಸರ ಮನೆಯಲ್ಲೇ ತಡರಾತ್ರಿ ಮನೆ ಬೀಗ ಮುರಿದು ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ. ಮೈಸೂರಿನ ಜೆಪಿನಗರದ ಎರಡನೇ ಹಂತದಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: KAS ಅಧಿಕಾರಿ ಹಣೆಗೆ ಕುಂಕುಮ ಇಟ್ಟ ಕಾಂಗ್ರೆಸ್ ಸಂಸದ: ಭಾರೀ ಚರ್ಚೆಗೆ ಗ್ರಾಸವಾಯ್ತು ಸುನೀಲ್ ಬೋಸ್ ನಡೆ
ಕಳ್ಳತನಕ್ಕೂ ಮುನ್ನ ಮನೆ ಬಾಗಿಲಿಗೆ ನಿಂಬೆ ಹಣ್ಣು ಹಿಡಿದು ನಮಸ್ಕಾರ ಮಾಡಿದ ಕಳ್ಳರು ಬಳಿಕ ಬಾಗಿಲು ಮೆಟ್ಟಿದ್ದಾರೆ. ಸಿನಿಮೀಯ ರೀತಿಯಲ್ಲಿ ಕಳ್ಳತನ ಮಾಡಿದ್ದಾರೆ. ಕಳ್ಳರು ಮನೆಯಲ್ಲಿರುವಾಗಲೇ ಮನೆ ಮಾಲೀಕರು ಮನೆಗೆ ವಾಪಾಸಾಗಿದ್ದಾರೆ. ಮನೆ ಮಾಲೀಕರನ್ನು ಕಂಡು ಗಾಬರಿಗೊಂಡು ಮಾರಾಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಚಾಕು ತೋರಿಸಿ ಕಳ್ಳರು ಎಸ್ಕೇಪ್ ಆಗಿದ್ದಾರೆ. ಎಸ್ಕೇಪ್ ಆಗುವ ವೇಳೆ ಕಳ್ಳತನಕ್ಕೆ ಬಳಸಿದ ಕಬ್ಬಿಣದ ರಾಡ್, ಸಲಾಕೆ ,ಎಲೆಕ್ಟ್ರಿಕ್ ಸಾಮಾನು, ಎರಡು ಬ್ಯಾಗ್ ಸೇರಿದಂತೆ ತಮ್ಮ ಲಗೇಜ್ಗಳನ್ನೇ ಬಿಟ್ಟು ಹೋಗಿದ್ದಾರೆ.
ಬಳಿಕ ಮನೆಯೊಳಗೆ ತೆರಳಿ ನೊಡಿದಾಗ 135ಗ್ರಾಂ ಗೂ ಅಧಿಕ ಚಿನ್ನಾಭರಣ ದೋಚಿರುವುದು ಖಚಿತವಾಗಿದೆ. ಬಳಿಕ ಘಟನಾ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು ಕಳ್ಳರಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.