Sunday, October 6, 2024

ಇಂದು ಕಾವೇರಿ, ಕಬಿನಿಗೆ ಸಿಎಂ ಸಿದ್ದರಾಮಯ್ಯ ಬಾಗಿನ

ಮಂಡ್ಯ: ಎರಡು ವರ್ಷಗಳ ಬಳಿಕ ಭರ್ತಿಯಾಗಿರುವ ಕನ್ನಡಿಗರ ಜೀವನಾಡಿ ಕನ್ನಂಬಾಡಿ ಅಣೆಕಟ್ಟಿಗೆ ಸಿಎಂ ಸಿದ್ದರಾಮಯ್ಯ ಇಂದು ಬಾಗಿನ ಅರ್ಪಿಸಲಿದ್ದು ಈ ಮೂಲಕ ಅವರು ಮೂರನೇ ಬಾರಿಗೆ KRS ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ.

ಜಲಾಶಯ ಭರ್ತಿಯಾದ ಅಥವಾ ಭರ್ತಿಯಾಗಿ 3ನೇ ದಿನ ಬಾಗಿನ ಸಲ್ಲಿಸುವುದು ವಾಡಿಕೆ. ಈ ಬಾರಿ ಜಲಾಶಯ ತುಂಬಿದ ಐದಾರು ದಿನಗಳ ಬಳಿಕ ಬಾಗಿನ ಸಲ್ಲಿಸಲಾಗುತ್ತಿದೆ. ಇಂದು ನಡೆಯುವ ಬಾಗಿನ ಸಮಾರಂಭಕ್ಕೆ ಜಿಲ್ಲಾಡಳಿತ, ಕಾವೇರಿ ನೀರಾವರಿ ನಿಗಮ ಹಾಗೂ ಪೊಲೀಸ್ ಇಲಾಖೆಯಿಂದ ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ವಾಡಿಕೆಯಂತೆ ಡಿಸಿಎಂ ಸೇರಿದಂತೆ ಸಚಿವರು ಹಾಗೂ ಅಧಿಕಾರಿಗಳು ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ನನ್ನನ್ನು ಬಂಧಿಸಿದರೇ ‘ಡಿಬಾಸ್’​ ಸೆಲ್​ ಪಕ್ಕದಲ್ಲೇ ಹಾಕಿ: ಯುವಕನ ವೀಡಿಯೋ ವೈರಲ್​

ಬಾಗಿನ ಅರ್ಪಣೆ ಕಾರ್ಯಕ್ರಮ ಹಿನ್ನೆಲೆ KRS ಡ್ಯಾಮ್‌ನ್ನು ಹೂ ಹಾಗೂ ಕನ್ನಡ ಧ್ವಜಗಳನ್ನು ಹಾಕಿ ಅಲಂಕಾರ ಮಾಡಲಾಗಿದ್ದು, ಮಧುವಣಗಿತ್ತಿಯಂತೆ ಸಿಂಗರಿಸಲಾಗಿದೆ. ಅಲ್ಲದೇ ಡ್ಯಾಂನ ಮುಂಭಾಗದ ವೇದಿಕೆ ಕಾರ್ಯಕ್ರಮಕ್ಕೆ ಜರ್ಮನ್ ಟೆಂಟ್‌ನ್ನು ಹಾಕಲಾಗುತ್ತದೆ.

11 ಗಂಟೆಗೆ ಭಾನುಪ್ರಕಾಶ್ ಅವರ ಸಮ್ಮುಖದಲ್ಲಿ ಬಾಗಿನ ಕಾರ್ಯಕ್ರಮ ಜರುಗಲಿದೆ. ಮೊದಲಿಗೆ ಸಿಎಂ ಹಾಗೂ ಸಚಿವರು ಕಾವೇರಿಗೆ ಬಾಗಿನ ಅರ್ಪಿಸಿದ ಬಳಿಕ ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇಂದು ಸಂಜೆ 3 ಗಂಟೆಗೆ ಮೈಸೂರಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಸಿಎಂ, ಡಿಸಿಎಂ ಬಾಗಿನ ಅರ್ಪಿಸಲಿದ್ದಾರೆ.

ಬಾಗೀನ ಅರ್ಪಣೆ ಹಿನ್ನೆಲೆ ಶ್ವಾನ ದಳದಿಂದ ತಪಾಸಣೆ:

ಇಂದು ಕಬಿನಿ ಹಾಗು ಕನ್ನಂಬಾಡಿ ಜಲಾಶಯಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಬಾಗೀನ ಅರ್ಪಿಸುವ ಕಾರ್ಯ ಇರುವ ಹಿನ್ನೆಲೆ ಶ್ವಾನದಳವು ಸ್ಥಳಕ್ಕೆ ಆಗಮಿಸಿದ್ದು ಪರಿಶೀಲನೆ ನಡೆಸಲಾಗಿದೆ.

RELATED ARTICLES

Related Articles

TRENDING ARTICLES