Friday, September 20, 2024

ಗಂಡನ ಅಕ್ರಮ ಸಂಬಂಧ: ಲೈವ್​ ವೀಡಿಯೋ ಮಾಡಿ ಗೃಹಿಣಿ ಆತ್ಮಹತ್ಯೆಗೆ ಶರಣು

ಬೆಂಗಳೂರು: ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತ ಮಹಿಳೆಯೊಬ್ಬರು ಲೈವ್​ ವೀಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಮಾನಸ (25) ಲೈವ್ ವೀಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಮಹಿಳೆ, ತನ್ನ ಗಂಡ ಬೇರೊಬ್ಬ ಮಹಿಳೆಯ ಸಹವಾಸ ಮಾಡಿದ್ದ ಹಿನ್ನೆಲೆ ಮನನೊಂದು ಬೆಂಗಳೂರಿನ ಅಂಧ್ರಹಳ್ಳಿಯ ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಮನೆಯಲ್ಲಿನ ಫ್ಯಾನಿಗೆ ವೇಲ್ ಸುತ್ತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಇದನ್ನೂ ಓದಿ: ಇಂದು ಕಾವೇರಿ, ಕಬಿನಿಗೆ ಸಿಎಂ ಸಿದ್ದರಾಮಯ್ಯ ಬಾಗಿನ

ಕಳೆದ ಆರು ವರ್ಷಗಳ ಹಿಂದೆ ದಿಲೀಪ್​ ಎಂಬಾತನೊಂದಿಗೆ ಮಾನಸ ವಿವಾಹವಾಗಿತ್ತು. ದಂಪತಿಗೆ 5 ವರ್ಷದ ಒಂದು ಹೆಣ್ಣು ಮಗು ಇದೆ. ಕಳೆದ ಒಂದೂವರೆ ವರ್ಷದಿಂದ ದಿಲೀಪ್​ ಬೇರೊಬ್ಬ ಮಹಿಳೆಯ ಸಹವಾಸದಲ್ಲಿದ್ದ. ಇದೇ ವಿಚಾರಕ್ಕೆ ಪತಿ ಪತ್ನಿಯ ನಡುವೆ ಆಗಾಗ ಗಲಾಟೆ ನಡೆಯುತ್ತಲೆ ಇತ್ತು. ಇದೇ ವಿಚಾರಕ್ಕೆ ಮನನೊಂದ ಮಾನಸ ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಲೈವ್​ ವೀಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಮಾನಸ ಸಾವಿಗೆ ಶರಣಾಗಿದ್ದು ಮಾನಸ ಪೋಷಕರು ಮಗಳ ಸಾವಿಗೆ ಪತಿ ಮನೆಯವರ ಕಿರುಕುಳವೇ ಕಾರಣ ಎಂದು ಆರೋಪ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಈ ಘಟನೆಯೂ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ಪ್ರಕರಣ ದಾಖಲಾಗಿದೆ. ಸದ್ಯ ಮೃತದೇಹ ವಿಕ್ಟೋರಿಯಾ ಆಸ್ಪತ್ರೆ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ.

RELATED ARTICLES

Related Articles

TRENDING ARTICLES