Friday, September 20, 2024

ಭಾರತಕ್ಕೆ ಮತ್ತೊಂದು ಪ್ರಶಸ್ತಿಯ ಗರಿ: ಏರ್​ ರೈಫಲ್ ಡಬಲ್ಸ್​ನಲ್ಲಿ ಮನು ಭಾಕರ್,​ ಸರಬ್ಜಿತ್​ಗೆ ಕಂಚು

ಪ್ಯಾರಿಸ್​: ಎರಡು ದಿನಗಳ ಹಿಂದೆ ಭಾರತಕ್ಕೆ ಕಂಚಿನ ಪದಕ ದಕ್ಕಿಸಿಕೊಡಿವ ಮೂಲಕ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಶುಭಾರಂಭ ಮಾಡಿದ್ದ ಏರ್​ ಪಿಸ್ತೂಲ್ ಶೂಟರ್​ ಮನು ಭಾಕರ್​ ಈಗ ಮತ್ತೊಂದು ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.

ಇದನ್ನೂ ಓದಿ: ಸೋತರು ಗೆಲುವಿನ ಬೆನ್ನೇರಿ ಪದಕಕ್ಕೆ ಮುತ್ತಿಟ್ಟ ಮನು ಭಾಕರ್ ರೋಚಕ ಕಥೆ

10 ಮೀ. ಏರ್‌ ಪಿಸ್ತೂಲ್‌ ಮಿಶ್ರ ತಂಡ ವಿಭಾಗದ ಸ್ಪರ್ಧೆಯಲ್ಲಿ ಸರಬ್ಜೋತ್‌ ಸಿಂಗ್‌ ಮತ್ತು ಮನು ಭಾಕರ್​ ಜೋಡಿ ಕಂಚಿನ ಪದಕಕ್ಕೆ ಮುತ್ತಿಕ್ಕಿದೆ. ಈ ಮೂಲಕ ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಜಯಿಸಿದ ಭಾರತದ ಮೊದಲ ಕ್ರೀಡಾಪಟು ಎನಿಸಿಕೊಂಡರು.

ಮಂಗಳವಾರ ನಡೆದ ಕಂಚಿನ ಪದಕ ಸ್ಪರ್ಧೆಯಲ್ಲಿ ಭಾರತೀಯ ಜೋಡಿ ದಕ್ಷಿಣ ಕೊರಿಯಾದ ಯೆ ಜಿನ್ ಒಹ್ ಮತ್ತು ವೊನೊಹೊ ಲೀ ವಿರುದ್ಧ  16-10 ಅಂಕಗಳಿಂದ ಗೆದ್ದು ಕಂಚಿನ ಪದಕ ತನ್ನದಾಗಿಸಿಕೊಂಡಿತು. ಈ ಬಾರಿಯ ಒಲಿಂಪಿಕ್ಸ್​ ಪದಕ ನಿರೀಕ್ಷೆಯ ಕ್ರೀಡಾಪಟುಗಳಲ್ಲಿ ಮನು ಭಾಕರ್​ ಕೂಡ ಕಾಣಿಸಿಕೊಂಡಿದ್ದರು. ಭಾರತೀಯರು ನಿರೀಕ್ಷೆ ಮಾಡಿದಂತೆ ಅವರು ಒಂದಲ್ಲ 2 ಪದಕ ಗೆದ್ದು ಅವರ ಮೇಲಿಟ್ಟ ನಂಬಿಕೆಯನ್ನು ಉಳಿಸಿಕೊಂಡಿದ್ದಾರೆ.

RELATED ARTICLES

Related Articles

TRENDING ARTICLES