Thursday, September 19, 2024

ವಯನಾಡಿನಲ್ಲಿ ಗುಡ್ಡ ಕುಸಿತ, 21 ಮಂದಿ ಸಾವು

ಕೇರಳ: ಕೊಡಗಿನಲ್ಲಿ 2018ರಲ್ಲಿ ನಡೆದ ಜಲಸ್ಫೋಟದಂತೆ ಕೇರಳದಲ್ಲೂ ದುರಂತ ಸಂಭವಿಸಿದೆ. ಮಂಗಳವಾರ ಮುಂಜಾನೆ ವಯನಾಡ್ ಜಿಲ್ಲೆಯ ಮೆಪ್ಪಾಡಿಯಲ್ಲಿ ಗುಡ್ಡ ಕುಸಿದಿದೆ. ಈ ದುರಂತದಲ್ಲಿ 21 ಮಂದಿ ಸಾವನ್ನಪ್ಪಿದ್ದು, ನೂರಾರು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ನಸುಕಿನ ಜಾವ 2 ಗಂಟೆಗೆ ಮೊದಲ ಭೂಕುಸಿತ ಸಂಭವಿಸಿದರೆ ಮುಂಜಾನೆ 4:10ರ ವೇಳೆ ಎರಡನೇ ಬಾರಿ ಸಂಭವಿಸಿದೆ. ಜಲಸ್ಫೋಟದಿಂದಾಗಿ ಗುಡ್ಡದಿಂದ ನೀರು ರಭಸವಾಗಿ ಮನೆಗಳ ಮೇಲೆ ಹರಿದು ಹೋಗಿದ್ದರಿಂದ ಸಾವು ನೋವಿನ ಪ್ರಮಾಣ ಏರಿಕೆಯಾಗುವ ಸಾಧ್ಯತೆಯಿದೆ.

ಇದನ್ನು ಓದಿ: ಮುಂದಿನ 48 ಗಂಟೆಗಳಲ್ಲಿ ಮೋಡ ಕವಿದ ವಾತಾವರಣ, ಹಗುರ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ವಯನಾಡು ಜಿಲ್ಲೆಯ ಅಧಿಕಾರಿಗಳ ಪ್ರಕಾರ ತೊಂಡರ್ನಾಡ್ ಗ್ರಾಮದಲ್ಲಿ ವಾಸಿಸುತ್ತಿದ್ದ ನೇಪಾಳಿ ಕುಟುಂಬದ ಒಂದು ವರ್ಷದ ಮಗು ಭೂಕುಸಿತವೊಂದರಲ್ಲಿ ಸಾವನ್ನಪ್ಪಿದೆ. ಭಾರೀ ಭೂಕುಸಿತದ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಸಂಸ್ಥೆಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡಗಳನ್ನು ಪೀಡಿತ ಪ್ರದೇಶಕ್ಕೆ ನಿಯೋಜಿಸಲಾಗಿದೆ.

RELATED ARTICLES

Related Articles

TRENDING ARTICLES