Friday, September 20, 2024

ವಯನಾಡಿನಲ್ಲಿ ಗುಡ್ಡ ಕುಸಿತ, ಸಾವಿನ ಸಂಖ್ಯೆ ಏರಿಕೆ: ಮೃತರ ಕುಟುಂಬಕ್ಕೆ ರಾಹುಲ್‌, ಮೋದಿ ಸಂತಾಪ

ಕೇರಳ: ವಯನಾಡ್ ಜಿಲ್ಲೆಯ ಮೆಪ್ಪಾಡಿಯಲ್ಲಿ ಗುಡ್ಡ ಕುಸಿದಿದೆ. ಈ ದುರಂತದಲ್ಲಿ 24 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ನೂರಾರು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ನಸುಕಿನ ಜಾವ 2 ಗಂಟೆಗೆ ಮೊದಲ ಭೂಕುಸಿತ ಸಂಭವಿಸಿದರೆ ಮುಂಜಾನೆ 4:10ರ ವೇಳೆ ಎರಡನೇ ಬಾರಿ ಸಂಭವಿಸಿದೆ.

ಜಲಸ್ಫೋಟದಿಂದಾಗಿ ಗುಡ್ಡದಿಂದ ನೀರು ರಭಸವಾಗಿ ಮನೆಗಳ ಮೇಲೆ ಹರಿದು ಹೋಗಿದ್ದರಿಂದ ಸಾವು ನೋವಿನ ಪ್ರಮಾಣ ಏರಿಕೆಯಾಗುವ ಸಾಧ್ಯತೆಯಿದೆ. ವಯನಾಡು ಜಿಲ್ಲೆಯ ಅಧಿಕಾರಿಗಳ ಪ್ರಕಾರ ತೊಂಡರ್ನಾಡ್ ಗ್ರಾಮದಲ್ಲಿ ವಾಸಿಸುತ್ತಿದ್ದ ನೇಪಾಳಿ ಕುಟುಂಬದ ಒಂದು ವರ್ಷದ ಮಗು ಭೂಕುಸಿತವೊಂದರಲ್ಲಿ ಸಾವನ್ನಪ್ಪಿದೆ.

ಮೃತರ ಕುಟುಂಬಕ್ಕೆ ರಾಹುಲ್‌ ಗಾಂಧಿ ಸಂತಾಪ:

ಕೇರಳದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, 21ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಮೃತರ ಕುಟುಂಬಕ್ಕೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಸಂತಾಪ ಸೂಚಿಸಿದ್ದಾರೆ. ಮಣ್ಣಿನಡಿ ಸಿಲುಕಿದವರ ರಕ್ಷಣಾ ಕಾರ್ಯ ನಡೆಯುತ್ತಿದೆ. ಕೇರಳ ಸಿಎಂ, ವಯನಾಡು ಡಿಸಿ ಜೊತೆ ಮಾತನಾಡಿದ್ದೇನೆ. ಅಗತ್ಯ ನೆರವು ನೀಡಲು ಕೇಂದ್ರಕ್ಕೆ ಮನವಿ ಮಾಡಿದ್ದೇವೆ ಅಂತಾ ತಮ್ಮ ಎಕ್ಸ್​ ಖಾತೆ ಮೂಲಕ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಮಾಹಿತಿ ನೀಡಿದ್ದಾರೆ.

ಅಗತ್ಯ ನೆರವಿನ ಭರವಸೆ ನೀಡಿದ ಪ್ರಧಾನಿ ಮೋದಿ:

ಕೇರಳದಲ್ಲಿ ವಯನಾಡಿನಲ್ಲಿ ಗುಡ್ಡ ಕುಸಿದಿದ್ದು 7 ಮಂದಿ ಸಾವನ್ನಪ್ಪಿದ್ದಾರೆ. 100ಕ್ಕೂ ಹೆಚ್ಚು ಮಂದಿ ಸಿಲುಕಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಈ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಮುಖ್ಯಮಂತ್ರಿ ಪಿಣರಾಯಿ ವಿಜಯ್​ ಅವರ ಬಳಿ ಮಾತನಾಡಿ, ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ವಯನಾಡಿನ ಕೆಲವು ಭಾಗಗಳಲ್ಲಿ ಭೂಕುಸಿತದಿಂದ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಗಾಯಗೊಂಡವರು ಬೇಗ ಗುಣಮುಖರಾಗಲಿ. ಭೂಕುಸಿತದ ಕುರಿತು ಪಿಣರಾಯಿ ವಿಜಯ್ ಅವರೊಂದಿಗೆ ಮಾತನಾಡಿದ್ದೇನೆ ಎಲ್ಲಾ ನೆರವನ್ನು ನೀಡಲು ಕೇಂದ್ರ ಸಿದ್ಧವಿದೆ ಎಂದು ಮೋದಿ ತಮ್ಮ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಹಾಗೆಯೇ ಪ್ರಧಾನಿ ಮೋದಿ ಸುರೇಶ್​ ಗೋಪಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರ ಬಳಿಯೂ ಮಾತನಾಡಿದ್ದು, ಬಿಜೆಪಿ ಕಾರ್ಯಕರ್ತರನ್ನು ಕಳುಹಿಸಿ ಅವರಿಗೆ ಬೇಕಾದ ನೆರವು ಒದಗಿಸುವಂತೆ ಕೇಳಿದ್ದಾರೆ. ಸಚಿವ ಜಾರ್ಜ್​ ಅವರ ಬಳಿಯೂ ಮಾತನಾಡಿದ್ದಾರೆ. ವಿರೋಧ ಪಕ್ಷದ ನಾಯಕ ಮತ್ತು ವಯನಾಡ್‌ನ ಮಾಜಿ ಲೋಕಸಭಾ ಸಂಸದ ರಾಹುಲ್ ಗಾಂಧಿ, ವಯನಾಡಿಗೆ ಸಾಧ್ಯವಿರುವ ಎಲ್ಲ ನೆರವು ಕೋರಲು ಕೇಂದ್ರ ಸಚಿವರೊಂದಿಗೆ ಮಾತನಾಡುವುದಾಗಿ ಹೇಳಿದ್ದಾರೆ. ವಯನಾಡಿನ ಮೆಪ್ಪಾಡಿ ಬಳಿ ಸಂಭವಿಸಿದ ಭಾರಿ ಭೂಕುಸಿತದಿಂದ ನಾನು ತೀವ್ರವಾಗಿ ನೊಂದಿದ್ದೇನೆ ಎಂದು ಬರೆದುಕೊಂಡಿದ್ದಾರೆ.

RELATED ARTICLES

Related Articles

TRENDING ARTICLES