Thursday, September 19, 2024

ಕೇರಳ​ ಗುಡ್ಡ ಕುಸಿತ: ಮೃತರ ಕುಟುಂಬಸ್ಥರಿಗೆ ₹2 ಲಕ್ಷ ಪರಿಹಾರ ಘೋಷಣೆ ಮೋದಿ

ಕೇರಳ: ವಯಾನಾಡ್​ನಲ್ಲಿ ಸಂಭವಿಸಿದ ಭೀಕರ ಗುಡ್ಡ ಕುಸಿತದಿಂದ ಮೃತಪಟ್ಟ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ನೀಡಲಾಗುವುದು ಎಂದು ಪ್ರಧಾನಿ ಕಾರ್ಯಾಲಯ ಘೋಷಿಸಿದೆ.

ಮತ್ತೊಂದೆಡೆ, ಕೇರಳದ ಇಬ್ಬರು ಕೇಂದ್ರ ಸಚಿವರಾದ ಸುರೇಶ್ ಗೋಪಿ ಮತ್ತು ಜಾರ್ಜ್ ಕುರಿಯನ್ ಅವರೊಂದಿಗೆ ಮೋದಿ ಮಾತನಾಡಿದ್ದಾರೆ. ರಕ್ಷಣಾ ಮತ್ತು ಪರಿಹಾರ ಕಾರ್ಯಗಳಲ್ಲಿ ನೆರವಾಗಲು ಪಕ್ಷದ ಕಾರ್ಯಕರ್ತರನ್ನು ಸಜ್ಜುಗೊಳಿಸುವಂತೆ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೂ ಸೂಚಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ವಯನಾಡಿನಲ್ಲಿ ಗುಡ್ಡ ಕುಸಿತ, ಸಾವಿನ ಸಂಖ್ಯೆ ಏರಿಕೆ: ಮೃತರ ಕುಟುಂಬಕ್ಕೆ ರಾಹುಲ್‌, ಮೋದಿ ಸಂತಾಪ

400ಕ್ಕೂ ಹೆಚ್ಚು ಕುಟುಂಬಗಳು ಸಿಲುಕಿರುವ ಶಂಕೆ:

ನೆರೆ ರಾಜ್ಯ ಕೇರಳದ ವಯನಾಡ್ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಇಂದು ಮುಂಜಾನೆ ಎರಡರಿಂದ ಮೂರು ಭೀಕರ ಭೂಕುಸಿತ ಉಂಟಾಗಿದೆ.. ಹಲವಾರು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸುಮಾರು 400 ಕುಟುಂಬಗಳು ತೊಂದರೆಗೊಳಗಾಗಿವೆ. ರಕ್ಷಣಾ ತಂಡಗಳು ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ನಡೆಸುತ್ತಿವೆ.

ವಯನಾಡಿನಲ್ಲಿ ಗುಡ್ಡ ಕುಸಿತ, ಸಾವಿನ ಸಂಖ್ಯೆ ಏರಿಕೆ:

ಮಂಗಳವಾರ ಮುಂಜಾನೆ ವಯನಾಡ್ ಜಿಲ್ಲೆಯ ಮೆಪ್ಪಾಡಿಯಲ್ಲಿ ಗುಡ್ಡ ಕುಸಿದಿದೆ. ಈ ದುರಂತದಲ್ಲಿ 24 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ನೂರಾರು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ನಸುಕಿನ ಜಾವ 2 ಗಂಟೆಗೆ ಮೊದಲ ಭೂಕುಸಿತ ಸಂಭವಿಸಿದರೆ ಮುಂಜಾನೆ 4:10ರ ವೇಳೆ ಎರಡನೇ ಬಾರಿ ಸಂಭವಿಸಿದೆ. ಜಲಸ್ಫೋಟದಿಂದಾಗಿ ಗುಡ್ಡದಿಂದ ನೀರು ರಭಸವಾಗಿ ಮನೆಗಳ ಮೇಲೆ ಹರಿದು ಹೋಗಿದ್ದರಿಂದ ಸಾವು ನೋವಿನ ಪ್ರಮಾಣ ಏರಿಕೆಯಾಗುವ ಸಾಧ್ಯತೆಯಿದೆ.

ವಯನಾಡು ಜಿಲ್ಲೆಯ ಅಧಿಕಾರಿಗಳ ಪ್ರಕಾರ ತೊಂಡರ್ನಾಡ್ ಗ್ರಾಮದಲ್ಲಿ ವಾಸಿಸುತ್ತಿದ್ದ ನೇಪಾಳಿ ಕುಟುಂಬದ ಒಂದು ವರ್ಷದ ಮಗು ಭೂಕುಸಿತವೊಂದರಲ್ಲಿ ಸಾವನ್ನಪ್ಪಿದೆ. ಭಾರೀ ಭೂಕುಸಿತದ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಸಂಸ್ಥೆಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡಗಳನ್ನು ಪೀಡಿತ ಪ್ರದೇಶಕ್ಕೆ ನಿಯೋಜಿಸಲಾಗಿದೆ.

RELATED ARTICLES

Related Articles

TRENDING ARTICLES