Friday, September 20, 2024

ಕೇರಳ ಗುಡ್ಡ ಕುಸಿತ: ಸಂತ್ರಸ್ತರ ನೆರವಿಗೆ ಕೈಜೋಡಿಸಲು ಸಚಿವ ಸಂತೋಷ್ ಲಾಡ್ ವಯನಾಡಿಗೆ

ದೆಹಲಿ: ಕೇರಳದಲ್ಲಿ ಗುಡ್ಡಕುಸಿತ ಉಂಟಾಗಿ ಅಪಾರ ಪ್ರಮಾಣದ ಪ್ರಾಣ ಹಾನಿ, ಆಸ್ತಿಪಾಸ್ತಿ ಹಾನಿಯಾಗಿರುವ ಹಿನ್ನೆಲೆ ಪರಿಹಾರ ಕಾರ್ಯದಲ್ಲಿ ನೆರವಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ.

ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಅಗತ್ಯ ಎಲ್ಲಾ ರೀತಿಯ ನೆರವುಗಳಿಗೆ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ ಜನರ ಜೀವ, ಆರೋಗ್ಯ ರಕ್ಷಣೆಗೆ ನೆರವಾಗುವಂತೆ ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ, ಬಿಜೆಪಿ ಪಾದಯಾತ್ರೆಗೆ ನಮ್ಮ ಬೆಂಬಲ ಇಲ್ಲ: ಕೇಂದ್ರ ಸಚಿವ HDK

ದೂರವಾಣಿ ಕರೆ ಸ್ವೀಕರಿಸುತ್ತಿದ್ದಂತೆ ವಯನಾಡಿಗೆ ಹೊರಟ ಸಚಿವ ಸಂತೋಷ್ ಲಾಡ್ ಸದ್ಯ ಕೇರಳ ರಾಜ್ಯದ ಮುಖ್ಯಮಂತ್ರಿ ಕಚೇರಿ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ದುರಂತದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ತುರ್ತು ಮತ್ತು ಕ್ಷಿಪ್ರ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಲಾಡ್ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES