Friday, September 20, 2024

ಕೇರಳ ಭೂಕುಸಿತ: 3,068 ಮಂದಿ ನಿರಾಶ್ರಿತರಿಗೆ ಆಶ್ರಯ, ಕನ್ನಡಿಗರ ರಕ್ಷಣೆಗೆ IAS ಅಧಿಕಾರಿಗಳ ನೇಮಕ

ಕೇರಳ:  ಮಹಾಮಳೆ ಹಿನ್ನೆಲೆ ಕೇರಳದಲ್ಲಿ ಗುಡ್ಡ ಕುಸಿತ ದುರಂತ ಸಂಭವಿಸಿದೆ.. ಇದ್ರಿಂದಾಗಿ ಪ್ರವಾಸಿಗರ ಸ್ವರ್ಗ ಸ್ಮಶಾನವಾಗಿ ಮಾರ್ಪಟ್ಟಿದೆ. ಮಣ್ಣಿನಡಿ ಸಿಲುಕಿದವರ ರಕ್ಷಣೆಗೆ NDRF, SDRF ಹರಸಾಹಸಪಡುತ್ತಿದೆ. ಗುಡ್ಡ ಕುಸಿತದ ಸ್ಥಳದಲ್ಲಿ ರೆಸ್ಕ್ಯೂ ಆಪರೇಷನ್ ಮುಂದುವರಿದಿದೆ. ಸಂತ್ರಸ್ಥರನ್ನು ಹೆಲಿಕಾಪ್ಟರ್ ಮೂಲಕ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಕಾಳಜಿ ಕೇಂದ್ರದಲ್ಲಿ 3,068 ಮಂದಿ ನಿರಾಶ್ರಿತರಿಗೆ ಆಶ್ರಯ ನೀಡಲಾಗಿದೆ. ಈವರೆಗೂ 32 ಮೃತದೇಹಗಳನ್ನು ಸಂಬಂಧಿಕರಿಗೆ ಹಸ್ತಾಂತರ ಮಾಡಲಾಗಿದೆ. ಚೆಲಿಯಾರ ನದಿಯಿಂದ 31 ಶವ ಹೊರತೆಗೆದಿದ್ದಾರೆ.

ಇದನ್ನೂ ಓದಿ: ಕಸ್ತೂರಿ ರಂಗನ್​ ವರದಿ ವಿರೋಧಿಸಿದ್ದ ಕೇರಳಕ್ಕೆ ಈಗ ಸಂಕಷ್ಟ

ಕನ್ನಡಿಗರ ರಕ್ಷಣೆಗೆ IAS ಅಧಿಕಾರಿಗಳ ನಿಯೋಜನೆ:

ವಯನಾಡು ಭೂಕುಸಿತ ಹಿನ್ನೆಲೆ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಇಬ್ಬರು IAS ಅಧಿಕಾರಿಗಳನ್ನು ಸಿಎಂ ಸಿದ್ದರಾಮಯ್ಯ ನಿಯೋಜಿಸಿದ್ದಾರೆ. ಭೂ ಕುಸಿತದಿಂದ ತತ್ತರಿಸಿರುವ ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದಕ್ಕಾಗಿ ಇಬ್ಬರು IAS ಅಧಿಕಾರಿಗಳನ್ನು ನಿಯೋಜಿಸಿದ್ದೇನೆ ಎಂದು ತಿಳಿಸಿದ್ದಾರೆ. ನವದೆಹಲಿಯಲ್ಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ, ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ್ದಾರೆ. ವಯನಾಡಿನಲ್ಲಿ ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆಗೆ ನೆರವಾಗಲು ಬೆಂಗಳೂರಿನಲ್ಲಿರುವ NDRF ತಂಡ ಹಾಗೂ ಮದ್ರಾಸ್ ಎಂಜಿನಿಯರ್ ಗ್ರೂಪ್ ಸೇನಾ ಪಡೆಗಳನ್ನು ತ್ವರಿತವಾಗಿ ತೆರಳುವಂತೆ ಸೂಚಿಸಲಾಗಿದೆ.

RELATED ARTICLES

Related Articles

TRENDING ARTICLES