Friday, September 20, 2024

ಕೇರಳ ಭೂಕುಸಿತ: ಭಾರತದೊಂದಿಗೆ ನಾವಿದ್ದೇವೆ- ಅಮೇರಿಕ ಅಧ್ಯಕ್ಷ ಜೋ ಬೈಡೆನ್​

ವಾಷಿಂಗ್ಟನ್: ಅಮೇರಿಕಾ ಅಧ್ಯಕ್ಷ ಜೋ ಬೈಡೆನ್​ ಅವರು ಕೇರಳದ ವಯಾನಾಡಿನಲ್ಲಿ ಸಂಭವಿಸಿದ ಭೂಕುಸಿತ ದುರಂತದ ಬಗ್ಗೆ ಸಂತಾಪ ಸೂಚಿಸಿದ್ದು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ವಿವಿಧ ಇಲಾಖೆಗಳ ಸಿಬ್ಬಂದಿಯನ್ನು ಶಾಘಿಸಿದ್ದಾರೆ.

ಜಿಲ್ ಬೈಡನ್ ಮತ್ತು ನಾನು ಕೇರಳದಲ್ಲಿ ಸಂಭವಿಸಿದ ದುರಂತ ಘಟನೆಯಲ್ಲಿ (ಭೂಕುಸಿತ) ಪ್ರೀತಿಪಾತ್ರರನ್ನು ಕಳೆದುಕೊಂಡ ದುಃಖಿತ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇವೆ’ ಎಂದು ಜೋ ಬೈಡನ್ ‘ಎಕ್ಸ್ ‘ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಕೇರಳದಲ್ಲಿ ಸಾವಿನ ಸಂಖ್ಯೆ 316ಕ್ಕೆ ಏರಿಕೆ: ಮರಳು ಕಲಾಕೃತಿ ರಚಿಸಿ ಶ್ರದ್ಧಾಂಜಲಿ ಸಲ್ಲಿಕೆ

ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಸೇನಾ ಸಿಬ್ಬಂದಿ ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿಯ ಧೈರ್ಯವನ್ನು ನಾವು ಪ್ರಶಂಸಿಸುತ್ತೇವೆ. ಈ ಕಷ್ಟದ ಸಮಯದಲ್ಲಿ ನಾವೆಲ್ಲರೂ ಭಾರತೀಯರ ಜತೆಯಲ್ಲಿರುತ್ತೇವೆ ಎಂದು ಅವರು ತಿಳಿಸಿದ್ದಾರೆ.

ವಯನಾಡ್‌ ದುರಂತ- ಸಾವಿನ ಸಂಖ್ಯೆ 316ಕ್ಕೆ ಏರಿಕೆ:

ವಯನಾಡ್‌ನಲ್ಲಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 316ಕ್ಕೆ ಏರಿಕೆಯಾಗಿದೆ. 200ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆಯಾಗಿದ್ದಾರೆ. ನೂರಾರು ಮಂದಿ ಗಾಯಗೊಂಡಿದ್ದಾರೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರವಾಹದಲ್ಲಿ ಮೃತಪಟ್ಟ 100ಕ್ಕೂ ಹೆಚ್ಚು ಜನರ ಗುರುತು ಪತ್ತೆಯಾಗಿಲ್ಲ. ಮಣ್ಣಿನಡಿ ಸಿಲುಕಿದವರ ರಕ್ಷಣೆಗೆ NDRF, SDRF ತಂಡ ಹರಸಾಹಸ ಪಡುತ್ತಿದೆ. ಈಗಾಗಲೇ 1,625 ಜನರ ರಕ್ಷಣೆ ಮಾಡಲಾಗಿದ್ದು 82 ನಿರಾಶ್ರಿತರ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ. ಸದ್ಯ ಗುಡ್ಡ ಕುಸಿತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುರೆದಿದೆ.

RELATED ARTICLES

Related Articles

TRENDING ARTICLES