Friday, September 20, 2024

ಕೇರಳದಲ್ಲಿ ಗುಡ್ಡ ಕುಸಿತ: 330ಕ್ಕೇರಿದ ಸಾವಿನ ಸಂಖ್ಯೆ

ಕೇರಳದ ವಯನಾಡ್ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಕುಸಿತ ಸಂಭವಿಸಿದ ಮುಂಡಕೈ ಪ್ರದೇಶದಲ್ಲಿ 18 ಮೃತದೇಹಗಳು ಪತ್ತೆಯಾಗಿದ್ದು, ಚಲಿಯಾರ್ ನದಿಯಿಂದ 5 ಮೃತದೇಹಗಳು ಹಾಗೂ 10 ದೇಹದ ಭಾಗಗಳಲ್ಲಿ ಹೊರತೆಗೆಯಲಾಗಿದೆ. ಇದರಿಂದಾಗಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 330ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ: ರಾಮಕೃಷ್ಣ ಆಶ್ರಮದಲ್ಲಿ ಬಾಲಕನಿಗೆ 3 ದಿನ ಕತ್ತಲ ಕೋಣೆಯಲ್ಲಿಟ್ಟು ಚಿತ್ರಹಿಂಸೆ

ಸೇನೆ ಕಾರ್ಯಾಚರಣೆಗೆ ಕೈ ಜೋಡಿಸಿದ್ದು, ನಾಪತ್ತೆಯಾಗಿರುವ ಇನ್ನೂ 280 ಮಂದಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಭಾರತೀಯ ಸೇನೆ, ನೌಕಾದಳ, ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ಹಲವು ವಿಭಾಗಗಳು ಸೇರಿದಂತೆ ಒಟ್ಟು 640 ತಂಡಗಳು ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿವೆ.

ಸೇನಾ ಹೆಲಿಕಾಪ್ಟರ್​ಗಳ ಹೊರತಾಗಿ ಪೊಲೀಸ್ ಇಲಾಖೆಯಿಂದ ನಿಯೋಜಿಸಲ್ಪಟ್ಟ ಹೆಲಿಕಾಪ್ಟರ್​ಗಳು ಸಹ ಚಲಿಯಾರ್ ನದಿ ದಡದಲ್ಲಿ ದುರಂತ ಉಂಟಾದ ಸ್ಥಳಗಳಲ್ಲಿ ತಪಾಸಣೆ ನಡೆಸಿವೆ. 84 ಮಂದಿಗೆ ವಯನಾಡ್, ಕೋಯಿಕ್ಕೋಡ್, ಮಳಪ್ಪುರಂ ಜಿಲ್ಲೆಗಳ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, 187 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದೆ.

RELATED ARTICLES

Related Articles

TRENDING ARTICLES