Thursday, September 19, 2024

ಹ್ಯಾಟ್ರಿಕ್​ ನಿರೀಕ್ಷೆಯಲ್ಲಿದ್ದ ಮನು ಭಾಕರ್​ಗೆ ಭಾರಿ ನಿರಾಸೆ

ಪ್ಯಾರಿಸ್​: ಹ್ಯಾಟ್ರಿಕ್​ ಪದಕದ ನಿರೀಕ್ಷೆಯಲ್ಲಿದ್ದ ಮನು ಭಾಕರ್​ಗೆ ಭಾರಿ ನಿರಾಸೆಯಾಗಿದೆ. ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಇಂದು(ಶನಿವಾರ) ನಡೆದ 25 ಮೀ. ಪಿಸ್ತೂಲ್​ ಶೂಟಿಂಗ್​ ಫೈನಲ್​ ಪಂದ್ಯದಲ್ಲಿ ನಾಲ್ಕನೇ ಸ್ಥಾನ ಪಡೆಯುವ ಮೂಲಕ ಅವರು ಐತಿಹಾಸಿಕ ಪದಕ ಗೆಲ್ಲುವ ಅವಕಾಶವೊಂದನ್ನು ಕಳೆದುಕೊಂಡರು.

ಫೈನಲ್​ ಹಂತದ ಮೊದಲ ಸುತ್ತಿನಲ್ಲಿ 6 ಅಂಕ ಗಳಿಸಿ 4ನೇ ಸ್ಥಾನದಲ್ಲಿದ್ದ ಮನು ಭಾಕರ್​ ಆ ಬಳಿಕದ ಸುತ್ತಿನಲ್ಲಿ ಪ್ರಗತಿ ಸಾಧಿಸಿ 2ನೇ ಸ್ಥಾನದೊಂದಿಗೆ ಈ ಸುತ್ತು ಮುಗಿಸಿದರು. 2ನೇ ಸುತ್ತಿನಲ್ಲಿ ಒಮ್ಮೆ 6ನೇ ಸ್ಥಾನಕ್ಕೆ ಕುಸಿದರೂ ಕೂಡ ತಕ್ಷಣ ಎಚ್ಚೆತ್ತುಕೊಂಡು ಮತ್ತೆ ಯಶಸ್ಸು ಸಾಧಿಸಿದರು. ಆದರೆ ಅಂತಿಮ ಹಂತದಲ್ಲಿ 28 ಅಂಕ ಪಡೆದು ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟರು.

ಇದನ್ನೂ ಓದಿ: ಸೋತರು ಗೆಲುವಿನ ಬೆನ್ನೇರಿ ಪದಕಕ್ಕೆ ಮುತ್ತಿಟ್ಟ ಮನು ಭಾಕರ್ ರೋಚಕ ಕಥೆ

ಇದಕ್ಕೂ ಮುನ್ನ ಮಹಿಳೆಯರ ವೈಯಕ್ತಿಕ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಮತ್ತು ಸರಬ್ಜೋತ್ ಸಿಂಗ್ ಜತೆಗೂಡಿ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ಸ್ಪರ್ಧೆಯಲ್ಲೂ ಕಂಚಿನ ಪದಕ ಜಯಿಸುವ ಮೂಲಕ ಸ್ವಾತಂತ್ರ್ಯ ಭಾರತದ ಇತಿಹಾಸದಲ್ಲೇ ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಜಯಿಸಿದ ಭಾರತದ ಮೊದಲ ಕ್ರೀಡಾಪಟು ಎನ್ನುವ ಐತಿಹಾಸಿಕ ದಾಖಲೆ ನಿರ್ಮಿಸಿದ್ದರು.

ಮಹಿಳಾ 25 ಮೀಟರ್ ಪಿಸ್ತೂಲ್ ಫೈನಲ್ ಸ್ಪರ್ಧೆಯ ಫಲಿತಾಂಶ:
1. ಜಿ ಯಾಂಗ್ (ಸೌತ್ ಕೊರಿಯ)- 37 ಅಂಕಗಳು
2. ಕ್ಯಾಮಿಲ್ಲೆ ಜೆಡ್ರೆ ಜೆವಿ (ಫ್ರಾನ್ಸ್)- 37 ಅಂಕಗಳು
3. ಮೇಜರ್ ವೆರೋನಿಕಾ (ಹಂಗೇರಿ)- 31 ಅಂಕಗಳು
4. ಮನು ಭಾಕರ್ (ಭಾರತ)- 28 ಅಂಕಗಳು

RELATED ARTICLES

Related Articles

TRENDING ARTICLES