Tuesday, September 17, 2024

ಪಾದಯಾತ್ರೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ವಿಜಯೇಂದ್ರ

ಮೈಸೂರು: ಮೈಸೂರು ಚಲೋ ಪಾದಯಾತ್ರೆ ಆರಂಭಕ್ಕೂ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ  ಬೆಳಗ್ಗೆ 7.45ಕ್ಕೆ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ಬಳಿಕ ಕೆಂಗೇರಿಗೆ ವಾಪಸ್‌ ಆಗಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣ ವಿರೋಧಿಸಿ ಬಿಜೆಪಿ ಪಾದಯಾತ್ರೆ ಆರಂಭಿಸಿದೆ. ಪಾದಯಾತ್ರೆಯಲ್ಲಿ ಬಿಜೆಪಿ- ಜೆಡಿಎಸ್​ ನಾಯಕರು ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ದ ಬಿಜೆಪಿ-ದಳ ಇಂದಿನಿಂದ ಪಾದಯಾತ್ರೆ ಆರಂಭ

ಸಿದ್ದು ಸರ್ಕಾರದ ಭ್ರಷ್ಟಾಚಾರ ಮಿತಿಮೀರಿದೆ:

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಹಿಂದಾ ಹೆಸರು ಹೇಳಿ ಅಧಿಕಾರ ಹಿಡಿದಿದೆ. ಆದರೆ, ಅಹಿಂದಾ ವರ್ಗಕ್ಕೆ ದ್ರೋಹ ಬಗೆದಿದೆ. ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮಿತಿಮೀರಿ ಹೋಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ B.Y.ವಿಯೇಂದ್ರ ಕಿಡಿಕಾರಿದ್ದಾರೆ. ಮೈಸೂರಲ್ಲಿ ಮಾತನಾಡಿದ ಅವರು, ತುಳಿತಕ್ಕೆ ಒಳಗಾದ ವರ್ಗಕ್ಕೆ ನ್ಯಾಯ ಸಿಗಬೇಕು. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಮುಡಾ ಹಗರಣ, ವಾಲ್ಮೀಕಿ ಹಗರಣ, SCSP, TSP ಹಣ ದುರ್ಬಳಕೆ ಸೇರಿದಂತೆ ಹಲವು ವಿಚಾರ ಇಟ್ಟುಕೊಂಡು ಪಾದಯಾತ್ರೆ ಮಾಡ್ತಿದ್ದೇವೆ ಎಂದು ತಿಳಿಸಿದರು.

ಅಧಿಕಾರ ಸಿಕ್ಕಾಗ ಹೀಗೆಲ್ಲಾ ಆಗುತ್ತದೆ:

ಬಿಜೆಪಿ ರಾಜ್ಯಾಧ್ಯಕ್ಷ B.Y.ವಿಜಯೇಂದ್ರ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್​ ಏಕವಚನ ಪದಪ್ರಯೋಗಿಸಿರುವ ವಿಚಾರ ಕುರಿತು ವಿಜಯೇಂದ್ರ ಪ್ರತಿಕ್ರಿಯಿಸಿ,  ಅಧಿಕಾರಕ್ಕೆ ಬಂದಾಗ ಕಾಂಗ್ರೆಸ್‌ನವರಿಗೆ ಈ ರೀತಿ ಆಗುತ್ತದೆ. ಅದ್ರ ಬಗ್ಗೆ ನಾನು ಮಾತನಾಡಲ್ಲ. ಪಾದಯಾತ್ರೆ ಮೊಟಕಾಗುವ ಪ್ರಶ್ನೆ ಇಲ್ಲ ಎಂದರು.

RELATED ARTICLES

Related Articles

TRENDING ARTICLES