Thursday, September 19, 2024

ಬೆಂಗಳೂರಿನಲ್ಲಿ ಹೊತ್ತಿ ಉರಿದ ಎಲೆಕ್ಟ್ರಿಕ್ ಬಸ್

ಬೆಂಗಳೂರು: ಭಾರೀ ಮಳೆಯ ನಡುವೆಯೇ ಎಲೆಕ್ಟ್ರಿಕ್ ಬಿಎಂಟಿಸಿ ಬಸ್ ಹೊತ್ತಿ ಉರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾತ್ರಿ 11:30ರ ಸುಮಾರಿಗೆ ಘಟನೆ ನಡೆದಿದ್ದು, ಬಸ್ ಸಂಪೂರ್ಣ ಬೆಂಕಿಗಾಹುತಿ ಆಗಿದೆ.

ಎಲೆಕ್ಟ್ರಿಕ್ ಬಸ್ ನಾಗಾವರ ಕಡೆಯಿಂದ ಹೆಬ್ಬಾಳ ಕಡೆಗೆ ಬರುತ್ತಿತ್ತು. ಹೆಬ್ಬಾಳದ BWSSB ಬಳಿಯ ಸರ್ವಿಸ್ ರಸ್ತೆಗೆ ಬರುತ್ತಿದ್ದಂತೆ ಏಕಾಏಕಿ ಬಸ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಕಂಡಕ್ಟರ್ ಬಸ್‌ನಿಂದ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಪ್ರಯಾಣಿಕರು ಕೆಳಗಿಳಿಯುತ್ತಿದ್ದಂತೆ ಏಕಾಏಕಿ ಬಸ್ ಹೊತ್ತಿ ಉರಿದಿದೆ.

ಇದನ್ನೂ ಓದಿ: 69ನೇ ಫಿಲ್ಮ್ ಫೇರ್ ಅವಾರ್ಡ್​ : ಅತ್ಯುತ್ತಮ ನಟ ರಕ್ಷಿತ್ ಶೆಟ್ಟಿ!

ಜೋರು ಮಳೆಯ ಪರಿಣಾಮ ಬಸ್‌ನ ಎಂಜಿನ್‌ಗೆ ನೀರು ಹೋಗಿ ಶಾರ್ಟ್ ಸರ್ಕ್ಯೂಟ್ ಆಗಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ವಾಹನ ಅಧಿಕಾರಿಗಳು, ಬಿಎಂಟಿಸಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆಯಿಂದಾಗಿ ಸುಮಾರು 8 ಕಿಲೋ ಮೀಟರ್‌ನಷ್ಟು ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳೀಯ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಯಿಂದ ಬಸ್ ತೆರವು ಕಾರ್ಯ ನಡೆಯಿತು.

RELATED ARTICLES

Related Articles

TRENDING ARTICLES