Wednesday, September 18, 2024

ಬಾಂಗ್ಲಾ ಪ್ರತಿಭಟನೆ: ಮಾಜಿ ಪ್ರಧಾನಿ ಹಸೀನಾ ಸೀರೆ, ಒಳ ಉಡುಪು ದೋಚಿದ ಪ್ರತಿಭಟನಾಕಾರರು

ಡಾಕಾ: ಬಾಂಗ್ಲಾದೇಶದಲ್ಲಿ ಉಂಟಾಗಿರುವ ಅರಾಜಕತೆ ವೇಳೆ ನಿರ್ಗಮಿತ ಪ್ರಧಾನಿ ಶೇಕ್ ಹಸೀನಾ ಅವರ ಗಾನಾಭವನ ನಿವಾಸಕ್ಕೆ ನುಗ್ಗಿದ್ದ ಪ್ರತಿಭಟನಾಕಾರರು ಸಿಕ್ಕಿದ್ದನ್ನೂ ದೋಚಿದ್ದಲ್ಲದೇ ಸೀರೆ, ಒಳಉಡುಪುಗಳನ್ನೂ ಹೊತ್ತೊಕೊಂಡು ಹೋಗಿದ್ದಾರೆ.

ಈ ಕುರಿತ ಫೋಟೊ, ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಕೆಲವರು ಸೀರೆಯನ್ನು ದೋಚಿ ಅವುಗಳನ್ನು ಉಟ್ಟುಕೊಂಡು ಸಂಭ್ರಮಿಸುತ್ತಾ ಸಾಗಿದ್ದಾರೆ. ಇನ್ನೂ ಕೆಲವರು ಶೇಕ್ ಹಸೀನಾ ಅವರ ಒಳಉಡುಪುಗಳನ್ನೂ ದೋಚಿ ಅವುಗಳನ್ನು ಪ್ರದರ್ಶಿಸುತ್ತಾ ವಿಜೃಂಭಿಸಿದ್ದಾರೆ. ಗಾನಾಭವನದ ಕೊಳದಲ್ಲಿ ಈಜಾಡಿ, ನಿವಾಸದಿಂದ ಸೋಫಾ, ಕುರ್ಚಿ, ಹೂಕುಂಡಗಳನ್ನು ತೆಗೆದುಕೊಂಡು ಹೋಗಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹೊತ್ತಿ ಉರಿದ ಎಲೆಕ್ಟ್ರಿಕ್ ಬಸ್

ಬ್ರಿಟನ್‌ಗೆ ತೆರಳುವವರೆಗೆ ಹಸೀನಾಗೆ ಭಾರತದಲ್ಲೇ ಆಶ್ರಯ?

ಮೀಸಲಾತಿ ದಂಗೆಗೆ ಬೆಚ್ಚಿದ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಹುದ್ದೆಗೆ ರಾಜೀನಾಮೆ ನೀಡಿ ಪಲಾಯನ ಮಾಡಿದ್ದಾರೆ. ಹಸೀನಾ ಬ್ರಿಟನ್‌ನಲ್ಲಿ ಆಶ್ರಯ ಪಡೆಯಲಿದ್ದಾರೆ ಎಂದು ಹೇಳಲಾಗಿದೆ. ಆದರೆ ಬ್ರಿಟನ್‌ನಲ್ಲಿ ಆಶ್ರಯಕ್ಕೆ ಇನ್ನೂ ಒಪ್ಪಿಗೆ ಸಿಗಲಿಲ್ಲ. ಹೀಗಾಗಿ ಹಸೀನಾ ಅವರಿಗೆ ಭಾರತದಲ್ಲಿ ತಾತ್ಕಾಲಿಕವಾಗಿ ಆಶ್ರಯ ನೀಡಲಾಗಿದೆ.

ಸದ್ಯಕ್ಕೆ, ಬಾಂಗ್ಲಾದೇಶದ ಮಾಜಿ ಪ್ರಧಾನಿಗೆ ಆಶ್ರಯ ನೀಡುವ ಬಗ್ಗೆ ಬ್ರಿಟನ್ ಸರ್ಕಾರದಿಂದ ಯಾವುದೇ ದೃಢೀಕರಣ ನೀಡಿಲ್ಲ. ಹೀಗಾಗಿ ಬ್ರಿಟನ್‌ನಲ್ಲಿ ಆಶ್ರಯ ಸಿಗುವವರೆಗೆ ಎಲ್ಲಾ ರೀತಿಯ ಬೆಂಬಲ ನೀಡಲಿದೆ ಎಂದು ಭಾರತ ಹೇಳಿರುವುದಾಗಿ ಡೈಲಿ ಸನ್ ವರದಿ ತಿಳಿಸಿದೆ.

ಹಸೀನಾ ಸಹೋದರಿ ಬ್ರಿಟನ್ ಪ್ರಜೆಯಾಗಿದ್ದು, ಅವರೊಂದಿಗೆ ವಾಸವಿರಲು ಯೋಜಿಸಿದ್ದಾರೆ ಎನ್ನಲಾಗಿದೆ. ಢಾಕಾದಲ್ಲಿನ ಬೆಳವಣಿಗೆಗಳನ್ನು ಭಾರತ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ. ಮಧ್ಯಂತರ ಸರ್ಕಾರವು ಬಾಂಗ್ಲಾದೇಶದ ಜವಾಬ್ದಾರಿಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಬಾಂಗ್ಲಾ ಸೇನಾ ಮುಖ್ಯಸ್ಥ ಜನರಲ್ ವಕಾರ್-ಉಜ್-ಜಮಾನ್ ಘೋಷಿಸಿದ್ದಾರೆ.

RELATED ARTICLES

Related Articles

TRENDING ARTICLES