Thursday, September 12, 2024

ಬಾಂಗ್ಲಾ ಕ್ರಿಕೆಟ್​ ತಂಡದ ಮಾಜಿ ನಾಯಕ ಮಶ್ರಫೆ ನಿವಾಸಕ್ಕೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು!

ಡಾಕಾ: ಬಾಂಗ್ಲಾದೇಶದಲ್ಲಿ ಪ್ರತಿಭಟನೆ ತೀವ್ರವಾಗಿದ್ದು ಬಾಂಗ್ಲಾದೇಶ ಕ್ರಿಕೆಟ್​ ತಂಡದ ಮಾಜಿ ನಾಯಕ ​ಮಶ್ರಫೆ ಮೊರ್ಟಾಜ ನಿವಾಸಕ್ಕೆ ಪ್ರತಿಭಟನಾಕಾರರು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯ ಕುರಿತು ಅವಾಮಿ ಲೀಗ್​ ಪಕ್ಷದ ಸಂಸದನೂ ಆಗಿರುವ ಬಾಂಗ್ಲ ತಂಡದ ಮಾಜಿ ನಾಯಕ ಮಶ್ರಫೆ ಮೋರ್ಟಾಜ ಹತ್ಯಾಕಾಂಡಗಳು ಮತ್ತು ವಿದ್ಯಾರ್ಥಿಗಳ ಬಂಧನದ ಕುರಿತು ಇದುವರೆಗೂ ಒಂದು ಮಾತನ್ನೂ ಆಡದೇ ಮೌನವಹಿಸಿರುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಮಶ್ರಫೆ ನಿವಾಸಕ್ಕೆ ಬೆಂಕಿ ಹಚ್ಚಿದ್ದಾರೆ.

ಮೀಸಲಾತಿ ವಿಚಾರವಾಗಿ ಈಗಾಗಲೇ ಬಾಂಗ್ಲಾದೇಶದಲ್ಲಿ ಸುಮಾರು 300 ಕ್ಕೂ ಹೆಚ್ಚು ಮಂದಿ ಸಾವನ್ನಪಿದ್ದಾರೆ. ಈ ನಡುವೆ ಬಾಂಗ್ಲಾದೇಶದ ನಿರ್ಗಮಿತ ಪ್ರಧಾನಿ ಶೇಖ್ ಹಸೀನ ಅವರು ರಾಜೀನಾಮೆ ನೀಡಿದ ಬಳಿಕ ದೇಶವನ್ನು ತೊರೆದಿದ್ದಾರೆ.

ಇದನ್ನೂ ಓದಿ: ಬಾಂಗ್ಲಾ ಪ್ರತಿಭಟನೆ: ಮಾಜಿ ಪ್ರಧಾನಿ ಹಸೀನಾ ಸೀರೆ, ಒಳ ಉಡುಪು ದೋಚಿದ ಪ್ರತಿಭಟನಾಕಾರರು

ಬ್ರಿಟನ್‌ಗೆ ತೆರಳುವವರೆಗೆ ಹಸೀನಾಗೆ ಭಾರತದಲ್ಲೇ ಆಶ್ರಯ?:

ಮೀಸಲಾತಿ ದಂಗೆಗೆ ಬೆಚ್ಚಿದ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಹುದ್ದೆಗೆ ರಾಜೀನಾಮೆ ನೀಡಿ ಪಲಾಯನ ಮಾಡಿದ್ದಾರೆ. ಹಸೀನಾ ಬ್ರಿಟನ್‌ನಲ್ಲಿ ಆಶ್ರಯ ಪಡೆಯಲಿದ್ದಾರೆ ಎಂದು ಹೇಳಲಾಗಿದೆ. ಆದರೆ ಬ್ರಿಟನ್‌ನಲ್ಲಿ ಆಶ್ರಯಕ್ಕೆ ಇನ್ನೂ ಒಪ್ಪಿಗೆ ಸಿಗಲಿಲ್ಲ. ಹೀಗಾಗಿ ಹಸೀನಾ ಅವರಿಗೆ ಭಾರತದಲ್ಲಿ ತಾತ್ಕಾಲಿಕವಾಗಿ ಆಶ್ರಯ ನೀಡಲಾಗಿದೆ.

ಸದ್ಯಕ್ಕೆ, ಬಾಂಗ್ಲಾದೇಶದ ಮಾಜಿ ಪ್ರಧಾನಿಗೆ ಆಶ್ರಯ ನೀಡುವ ಬಗ್ಗೆ ಬ್ರಿಟನ್ ಸರ್ಕಾರದಿಂದ ಯಾವುದೇ ದೃಢೀಕರಣ ನೀಡಿಲ್ಲ. ಹೀಗಾಗಿ ಬ್ರಿಟನ್‌ನಲ್ಲಿ ಆಶ್ರಯ ಸಿಗುವವರೆಗೆ ಎಲ್ಲಾ ರೀತಿಯ ಬೆಂಬಲ ನೀಡಲಿದೆ ಎಂದು ಭಾರತ ಸರ್ಕಾರ ಹೇಳಿದೆ. ಹಸೀನಾ ಸಹೋದರಿ ಬ್ರಿಟನ್ ಪ್ರಜೆಯಾಗಿದ್ದು, ಅವರೊಂದಿಗೆ ವಾಸವಿರಲು ಯೋಜಿಸಿದ್ದಾರೆ ಎನ್ನಲಾಗಿದೆ. ಢಾಕಾದಲ್ಲಿನ ಬೆಳವಣಿಗೆಗಳನ್ನು ಭಾರತ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ. ಮಧ್ಯಂತರ ಸರ್ಕಾರವು ಬಾಂಗ್ಲಾದೇಶದ ಜವಾಬ್ದಾರಿಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಬಾಂಗ್ಲಾ ಸೇನಾ ಮುಖ್ಯಸ್ಥ ಜನರಲ್ ವಕಾರ್-ಉಜ್-ಜಮಾನ್ ಘೋಷಿಸಿದ್ದಾರೆ.

RELATED ARTICLES

Related Articles

TRENDING ARTICLES