Thursday, September 19, 2024

ಯಡಿಯೂರಪ್ಪನಿಗೆ ಈ ವಯಸ್ಸಿನಲ್ಲಿ ಇದು ಬೇಕಿತ್ತಾ: ಸಿಎಂ ಸಿದ್ದರಾಮಯ್ಯ

ಮೈಸೂರು: ಪಾದ ಯಾತ್ರೆ ಮುಗಿಯುವಷ್ಟರಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಮಾಜಿ ಸಿಎಂ ಬಿಎಸ್‌ವೈ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.

ಮೈಸೂರಿನಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಮೇಲೆ ಪೋಕ್ಸೊ ಕೇಸ್ ಇದೆ. ನ್ಯಾಯಾಲಯದ ದಯೆಯಿಂದ ಯಡಿಯೂರಪ್ಪ ಬದುಕಿದ್ದಾರೆ. ಇಲ್ಲವಾದರೇ ಯಡಿಯೂರಪ್ಪ ಜೈಲಲ್ಲಿ ಇರಬೇಕಿತ್ತು. 82 ವರ್ಷ ವಯಸ್ಸಿನಲ್ಲಿ ಇದು ಬೇಕಿತ್ತಾ. ಚಿಕ್ಕ ಮಗುವಿನ ಮೇಲೆ ಈ ರೀತಿ ಮಾಡಬೇಕಿತ್ತಾ. ಯಡಿಯೂರಪ್ಪಗೆ ಯಾವ ನೈತಿಕತೆ ಇದೆ ನನ್ನ ಬಗ್ಗೆ ಮಾತನಾಡುವುದ್ದಕ್ಕೆ. ಯಡಿಯೂರಪ್ಪ ರಾಜಕೀಯ ಜೀವನದಿಂದ ನಿವೃತ್ತಿಯಾಗಬೇಕಿತ್ತು. ಮೈಸೂರಿನಲ್ಲಿ ಯಡಿಯೂರಪ್ಪ ವಿರುದ್ಧ ಸಿಎಂ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ: ಮುಡಾ ವಿಚಾರದಲ್ಲಿ ನಾನು ತಪ್ಪು ಮಾಡಿಲ್ಲ, ಯಾವುದೇ ಪ್ರಭಾವ ಬಳಸಿಲ್ಲ: ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ ಹಗರಣಗಳನ್ನ ಬಿಚ್ಚಿಡುತ್ತೇನೆ:

ಮೈಸೂರು ಸಮಾವೇಶದಲ್ಲಿ ಬಿಜೆಪಿ-ಜೆಡಿಎಸ್ ಸರ್ಕಾರದ ಅವಧಿಯ ಎಲ್ಲಾ ಹಗರಣಗಳನ್ನ ಬಿಚ್ಚಿಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಜೆಡಿಎಸ್ ಬಿಜೆಪಿ ಏನೇಲ್ಲಾ ಹಗರಣಗಳನ್ನ ಮಾಡಿದ್ದಾರೆ. ಎಲ್ಲವನ್ನೂ ಸಂಪೂರ್ಣವಾಗಿ ಸಮಾವೇಶದಲ್ಲಿ ತೆರೆದಿಡುತ್ತೇನೆ ಎಂದು ಎಚ್ಚರಿಕೆ ಕೊಟ್ಟರು. ಇನ್ನು ಸುಳ್ಳುಗಳನ್ನ ಹೆದುರಿಸುವ ತಾಖತ್ತು ನನಗೆ ಇದೆ. ಇವರ ಸುಳ್ಳುಗಳಿಗೆ ನಾನು ಹೆದರುವುದಿಲ್ಲ. ಬಿಜೆಪಿಯವರದ್ದೇ ಭ್ರಷ್ಟ ಸರ್ಕಾರ. ಅವರದ್ದೇ ಹಗರಣಗಳ ಬಗ್ಗೆ ತನಿಖೆ ನಡೆಯುತ್ತಿದೆ ಎಂದರು.

ಇನ್ನು ಬಿಜೆಪಿ ಜೆಡಿಎಸ್ ನನ್ನನ್ನ ಟಾರ್ಗೆಟ್ ಮಾಡುತ್ತಿದ್ದಾರೆ. ನನ್ನನ್ನ ಟಾರ್ಗೆಟ್ ಮಾಡಿ ಸರ್ಕಾರವನ್ನ ದುರ್ಬಲಗೊಳಿಸಲು ಯತ್ನಿಸುತ್ತಿದ್ದಾರೆ. ಇದರಲ್ಲಿ ಅವರು ಯಶಸ್ವಿಯಾಗುವುದಿಲ್ಲ. ಜನ ಇವರ ಸುಳ್ಳನ್ನ ನಂಬುವುದಿಲ್ಲ. ಹಿಂದೆನೂ ಈ ಪ್ರಯತ್ನ ಮಾಡಿದ್ದರು ಅಪರೇಷನ್ ಕಮಲದ ಮೂಲಕ ಸರ್ಕಾರ ದುರ್ಬಲಗೊಳಿಸಲು ಯತ್ನಿಸಿದ್ದರು ಎಂದು ಅವರು ಹೇಳಿದರು.

RELATED ARTICLES

Related Articles

TRENDING ARTICLES