Friday, September 20, 2024

ಮದ್ಯಪ್ರಿಯರಿಗೆ ಸಿಹಿಸುದ್ದಿ: ಮದ್ಯರಾತ್ರಿ 1ಗಂಟೆಯ ವರೆಗೆ ಮದ್ಯ ಮಾರಾಟಕ್ಕೆ ಅವಕಾಶ

ಬೆಂಗಳೂರು: ಮದ್ಯ ಪ್ರಿಯರಿಗೆ ಮತ್ತೊಂದು ಸಿಹಿ ಸುದ್ದಿ. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಬಾರ್‌, ಹೋಟೆಲ್‌, ಕ್ಲಬ್‌, ಸ್ಟಾರ್‌ ಹೋಟೆಲ್‌ಗಳು ಮತ್ತು ಬೋರ್ಡಿಂಗ್‌ ಹೌಸ್‌ಗಳಲ್ಲಿ ಮಧ್ಯರಾತ್ರಿ 1 ಗಂಟೆವರೆಗೆ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿಯಲ್ಲಿ ನಡೆದ 2024–25ನೇ ಸಾಲಿನ ಬಜೆಟ್‌ ಭಾಷಣೆಯಲ್ಲಿ ಈ ಬಗ್ಗೆ ಘೋಷಿಸಿದ್ದರು. ಅದರಂತೆ ಈ ಪ್ರಸ್ತಾವನೆಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ ನಿರ್ಬಂಧವನ್ನು ವಿಸ್ತರಿಸಲಾಗಿದೆ ಎಂದು ಜುಲೈ 29ರಂದೇ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಇದರಂತೆ ವ್ಯಾಪಾರ, ವಾಹಿವಾಟು ಸುಧಾರಿಸುವ ಉದ್ದೇಶದಿಂದ ಬಿಬಿಎಂಪಿ ವ್ಯಾಪ್ತಿಯ ಬಾರ್, ಕ್ಲಬ್ ಸೇರಿದಂತೆ ಇತರ ವ್ಯಾಪಾರ ಸಂಸ್ಥೆಗಳಲ್ಲಿ ಮಧ್ಯರಾತ್ರಿ 1 ಗಂಟೆಯವರೆಗೆ ತೆರೆದಿರಲು ಅನುಮತಿ ನೀಡಲಾಗಿದೆ.

ಇದನ್ನೂ ಓದಿ: ಬಾಂಗ್ಲಾ ಪ್ರತಿಭಟನೆ: ಮಾಜಿ ಪ್ರಧಾನಿ ಹಸೀನಾ ಸೀರೆ, ಒಳ ಉಡುಪು ದೋಚಿದ ಪ್ರತಿಭಟನಾಕಾರರು

ಬಿಬಿಎಂಪಿ ಮಿತಿಯಲ್ಲಿರುವ ಮದ್ಯ ವ್ಯಾಪಾರ ಸಂಸ್ಥೆಗಳಿಗೆ ಮಾತ್ರ ಈ ಆದೇಶ ಅನ್ವಯಿಸಲಿದೆ. ಈ ನಿರ್ಧಾರ ರಾಜ್ಯ ಸರ್ಕಾರಕ್ಕೆ ತನ್ನ ಆದಾಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ನಗರದ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲು ಅವಕಾಶ ನೀಡಬೇಕೆಂದು ಒತ್ತಾಯಿಸುತ್ತಿರುವ ಬೃಹತ್ ಬೆಂಗಳೂರು ಹೋಟೆಲ್‌ಗಳ ಸಂಘ, ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದೆ.

ಆದರೆ, ಕೆಲವು ನೆಟ್ಟಿಗರು ಈ ನಿರ್ಧಾರವನ್ನು ವಿರೋಧಿಸಿದ್ದಾರೆ. ಇದು ನಗರದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರುತ್ತದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

RELATED ARTICLES

Related Articles

TRENDING ARTICLES