Thursday, September 19, 2024

ಮುಡಾ ವಿಚಾರದಲ್ಲಿ ನಾನು ತಪ್ಪು ಮಾಡಿಲ್ಲ, ಯಾವುದೇ ಪ್ರಭಾವ ಬಳಸಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ಮುಡಾ ವಿಚಾರದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ, ಪ್ರಭಾವ ಬಳಸಿಲ್ಲ. ಯಡಿಯೂರಪ್ಪ ಜೈಲಿಗೆ ಹೋಗಿದ್ದ ಪ್ರಕರಣವೇ ಬೇರೆ, ಇದೇ ಬೇರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮುಡಾದಲ್ಲಿ ಸಿಎಂಗೆ ಬದಲಿ ಭೂಮಿ ಪಡೆದಿರುವ ವಿಚಾರ‌ಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಬದಲಿ ಭೂಮಿ ಕೊಡುವುದು ಬೇಡ ಎಂದು ನಾನು ಹೇಳಿದ್ದೆ. ನನ್ನ ಪತ್ನಿ ಬದಲಿ ನಿವೇಶನಕ್ಕೆ ಅರ್ಜಿ ಕೊಟ್ಟಾಗ ನಾನು ಸಿಎಂ ಆಗಿದ್ದೆ. ನಾನು ಸಿಎಂ ಆಗಿರುವ ತನಕ ಕೊಡಬೇಡಿ ಎಂದಿದ್ದೇ. ಪ್ರಭಾವ ಬಳಸುವುದಿದ್ದರೇ ಅಂದೇ ಬಳಸುತ್ತಿದೆ. ಭೂಮಿ ಕೊಡಲು ಹೇಳುತ್ತಿದೆ. ಸಿಎಂ ಆಗಿ ಕೊಡಲು ಆಗುತ್ತಿರಲಿಲ್ವಾ. ಮತ್ತೆ ನನ್ನ ಪತ್ನಿ 2021ರಲ್ಲಿ ಅರ್ಜಿ ಹಾಕಿದ್ದು, ಬಿಜೆಪಿ ಸರ್ಕಾರ ಕಾನೂನಾತ್ಮಕವಾಗಿ ಭೂಮಿ ನೀಡಿದೆ.

ಇದನ್ನೂ ಓದಿ: ಮದ್ಯಪ್ರಿಯರಿಗೆ ಸಿಹಿಸುದ್ದಿ: ಮದ್ಯರಾತ್ರಿ 1ಗಂಟೆಯ ವರೆಗೆ ಮದ್ಯ ಮಾರಾಟಕ್ಕೆ ಅವಕಾಶ

ಮುಡಾ ವಿಚಾರದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ, ಪ್ರಭಾವ ಬಳಸಿಲ್ಲ. ಯಡಿಯೂರಪ್ಪ ಜೈಲಿಗೆ ಹೋಗಿದ್ದ ಪ್ರಕರಣವೇ ಬೇರೆ, ಇದೇ ಬೇರೆ. ಯಡಿಯೂರಪ್ಪ ಡಿನೋಟಿಫೈ ಮಾಡಿದ್ದರು, ಚೆಕ್ ಮೂಲಕ ಹಣ ಪಡೆದಿದ್ದರು. ಇಲ್ಲಿ ನಾನು ಯಾವುದೇ ಹಣ ಪಡೆದಿಲ್ಲ, ಪ್ರಭಾವ ಬೀರಿಲ್ಲ. ಎಂದು ಹೇಳಿದರು.

ಯಡಿಯೂರಪ್ಪ ವಿರುದ್ಧ ಸಿದ್ದು ಫುಲ್ ಗರಂ:

ಪಾದ ಯಾತ್ರೆ ಮುಗಿಯುವಷ್ಟರಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಮಾಜಿ ಸಿಎಂ ಬಿಎಸ್‌ವೈ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಮೇಲೆ ಪೋಕ್ಸೊ ಕೇಸ್ ಇದೆ. ನ್ಯಾಯಾಲಯದ ದಯೆಯಿಂದ ಯಡಿಯೂರಪ್ಪ ಬದುಕಿದ್ದಾರೆ. ಇಲ್ಲವಾದರೇ ಯಡಿಯೂರಪ್ಪ ಜೈಲಲ್ಲಿ ಇರಬೇಕಿತ್ತು. 82 ವರ್ಷ ವಯಸ್ಸಿನಲ್ಲಿ ಇದು ಬೇಕಿತ್ತಾ. ಚಿಕ್ಕ ಮಗುವಿನ ಮೇಲೆ ಈ ರೀತಿ ಮಾಡಬೇಕಿತ್ತಾ. ಯಡಿಯೂರಪ್ಪಗೆ ಯಾವ ನೈತಿಕತೆ ಇದೆ ನನ್ನ ಬಗ್ಗೆ ಮಾತನಾಡುವುದ್ದಕ್ಕೆ. ಯಡಿಯೂರಪ್ಪ ರಾಜಕೀಯ ಜೀವನದಿಂದ ನಿವೃತ್ತಿಯಾಗಬೇಕಿತ್ತು ಎಂದು ಸಿಎಂ ವಾಗ್ದಾಳಿ ನಡೆಸಿದರು.

RELATED ARTICLES

Related Articles

TRENDING ARTICLES