ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗು ಹಾಲಿ ಕೆಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಅಕ್ರಮ ಗಣಿಗಾರಿಕೆಗೆ ಅನುಮತಿ ನೀಡಿರುವ ಪ್ರಕರಣದ ಕಾನೂನಿನ ಸುಳಿಯಲ್ಲಿ ಸಿಲುಕಿಕೊಳ್ಳುವ ಸಾಧ್ಯತೆ ದಟ್ಟವಾಗಿದ್ದು, ಈ ಕೇಸ್ಗೆ ಸಂಬಂಧಿಸಿದಂತೆ ರಾಜ್ಯದ ಜನಪ್ರಿಯ ನ್ಯೂಸ್ ಚಾನಲ್ ಪವರ್ ಟಿವಿಯೂ ದಾಖಲೆಗಳ ಸಮೇತ ಸುದ್ದಿ ಪ್ರಸಾರ ಮಾಡಿದೆ. ಈ ಸುದ್ದಿ ಪ್ರಸಾರವಾಗುತ್ತಿದ್ದಂತೆ ಕುಮಾರಸ್ವಾಮಿ ವಿರುದ್ದರ ಗಣಿಕಾರಿಕೆ ಪ್ರಕಣಕ್ಕೆ ಮರುಜೀವ ಬಂದಿದೆ.
ಇದನ್ನೂ ಓದಿ: ಕುಮಾರಸ್ವಾಮಿ ಸುತ್ತ ಅಕ್ರಮ ಗಣಿಗಾರಿಕೆ ಹುತ್ತ: ಹೆಚ್ಡಿಕೆ ತಪ್ಪು ಮಾಡಿದ್ರು ಬಿಜೆಪಿ ಸಪೋರ್ಟ್
2007ರಲ್ಲಿ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಹೆಚ್ಡಿ ಕುಮಾರಸ್ವಾಮಿ ಯವರು ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಅಕ್ರಮವಾಗಿ 550 ಎಕರೆ ಅಕ್ರಮ ಗಣಿಗಾರಿಕೆಗೆ ಅಕ್ರಮವಾಗಿ ಅನುಮತಿ ನೀಡಿದ್ದಾರೆ. ಈ ಗಣಿಗಾರಿಕೆಗೆ ಅನುಮತಿ ನೀಡುವುದು ಬೇಡ ಎಂದು ಅಂದಿನ ಅಧಿಕಾರಿಗಳು ಸಲಹೆ ನೀಡಿದ್ದರು ನಿಯಮಗಳನ್ನು ಗಾಳಿಗೆ ತೂರಿ ಅಕ್ರಮ ಗಣಿಗಾರಿಕೆಗೆ ಸಹಿಹಾಕಿದ್ದರು.
ಬಳಿಕ ಅಕ್ರಮ ಗಣಿಗಾರಿಕೆಗೆ ಅನುಮತಿ ನೀಡಿದ ಪ್ರಕರಣದ ತನಿಖೆಗಾಗಿ 2014ರಲ್ಲಿ ಲೋಕಾಯುಕ್ತ ವಿಶೇಷ ತಂಡ ರಚಿಸಲಾಗಿತ್ತು. ತನಿಖೆ ಬಳಿಕ ನ್ಯಾಯಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲು ಅನುಮತಿ ಕೋರಿ ಇದೇ ಲೋಕಾಯುಕ್ತ ರಾಜ್ಯಪಾಲರಿಗೆ ಪತ್ರ ಬರೆದಿತ್ತು. ಪತ್ರ ಬರೆದು ಎಂಟೂವರೆ ತಿಂಗಳಾದ್ರೂ ಲೋಕಾಯುಕ್ತ ಅಧಿಕಾರಿಗಳ ಪತ್ರಕ್ಕೆ ಇದುವರೆಗೂ ರಾಜ್ಯಪಾಲರು ಅನುಮತಿ ನೀಡಿಲ್ಲ ಇದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.