Friday, September 20, 2024

ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ವಿದಾಯ ಘೋಷಿಸಿದ ವಿನೇಶ್​ ಫೊಗಾಟ್​

ನವದೆಹಲಿ: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಫೈನಲ್​ ಪಂದ್ಯಕ್ಕು ಮುನ್ನ ಅನರ್ಹಗೊಂಡ ಬೆನ್ನಲ್ಲೇ ಮಹಿಳಾ ಕುಸ್ತಿಪಟು ವಿನೇಶ್​ ಫೊಗಾಟ್​ ಅವರು ಕುಸ್ತಿಗೆ ವಿದಾಯ ಘೋಷಿಸಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್​ ಹಂಚಿಕೊಂಡಿದ್ದಾರೆ.

ವಿನೇಶ್ ಫೋಗಟ್ ಖಚಿತವಾಗಿ ಬಂಗಾರ ಗೆಲ್ಲುವ ನಿರೀಕ್ಷೆ ಭಾರತೀಯರಿಗಿತ್ತು. ಆದರೆ, ಪದಕ ಸುತ್ತಿನ ಪಂದ್ಯಕ್ಕೂ ಮುನ್ನ ದೇಹದ ತೂಕದಲ್ಲಿ ಕೇವಲ 100 ಗ್ರಾಂ ಅಧಿಕವಿದ್ದ ಕಾರಣದಿಂದ, 29 ವರ್ಷದ ಕುಸ್ತಿಪಟುವನ್ನು ಫೈನಲ್‌ನಿಂದ ಅನರ್ಹಗೊಳಿಸಲಾಯಿತು. ಇದಾದ ಮರುದಿನವೇ ಅವರು ನಿವೃತ್ತಿ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: ವಿನೇಶ್ ಫೋಗಟ್‌ ಫೈನಲ್​ನಲ್ಲಿ ಗೆದ್ದರೂ ಗೆಲ್ಲದಿದ್ದರೂ ಭಾರತೀಯರ ಪಾಲಿಗೆ ಚಿನ್ನವಿದಂತೆ

ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಹಂಚಿಕೊಳ್ಳುವ ಮೂಲಕ ಧೃಢಪಡಿಸಿದ್ದಾರೆ. ಈ ಪೋಸ್ಟ್​ನಲ್ಲಿ ‘ಅಮ್ಮಾ, ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ನಾನು ಸೋತೆ, ಕ್ಷಮಿಸಿ. ನಿನ್ನ ಕನಸು, ನನ್ನ ಧೈರ್ಯ ಎಲ್ಲ ಭಗ್ನವಾಯಿತು. ನನ್ನ ಧೈರ್ಯ ಸಂಪೂರ್ಣ ಛಿದ್ರವಾಗಿದೆ, ಈಗ ಹೆಚ್ಚಿನ ಶಕ್ತಿ ಉಳಿದಿಲ್ಲ’ ಎಂದು ವಿನೇಶ್ ಫೋಗಟ್ ಬರೆದುಕೊಂಡಿದ್ದಾರೆ. ಕುಸ್ತಿಗೆ ವಿದಾಯ. ನಿಮ್ಮೆಲ್ಲರಿಗೂ ನಾನು ಸದಾ ಋಣಿಯಾಗಿರುತ್ತೇನೆ, ಕ್ಷಮಿಸಿ ಎಂದು ವಿನೇಶ್ ಫೋಗಟ್ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ತೂಕ ಇಳಿಸುವ ಪ್ರಯತ್ನದಲ್ಲಿ ರಾತ್ರಿಯಿಡೀ ತಂಡ ನಡೆಸಿದ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ, ವಿನೇಶ್ ಫೋಗಟ್ ಬುಧವಾರ ಬೆಳಗ್ಗೆ ನಿಗದಿತ 50 ಕೆಜಿಗಿಂತ 100ಗ್ರಾಂ ಹೆಚ್ಚುವರಿ ತೂಕವನ್ನು ಹೊಂದಿದ್ದರು. ಇಂದರಿಂದ ಪೈನಲ್ ಪಂದ್ಯದಿಂದ ಅನರ್ಹಗೊಂಡಿದ್ದಾರೆ ಎಂದು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ​​ಹೇಳಿಕೆಯಲ್ಲಿ ತಿಳಿಸಿತ್ತು.

RELATED ARTICLES

Related Articles

TRENDING ARTICLES