Tuesday, September 17, 2024

ಮೇಕೆದಾಟು ಯೋಜನೆ: ರಾಜ್ಯ ಹಾಗೂ ತಮಿಳುನಾಡು ನಡುವೆ ಸಭೆ ನಡೆಸುವಂತೆ ಮನವಿ ಮಾಡಿದ್ದೇನೆ: DKS

ಮಂಡ್ಯ: ಮೇಕೆದಾಟು ಯೋಜನೆ ಜಾರಿಗೆ ನಮ್ಮ ಸರ್ಕಾರ ಕಾನೂನು ಹೋರಾಟವನ್ನು ಮಾಡಲಿದ್ದು, ನಾನು ಈಗಾಗಲೇ ಪ್ರಧಾನಮಂತ್ರಿ ಹಾಗೂ ನೀರಾವರಿ ಸಚಿವರನ್ನು ಭೇಟಿ ಮಾಡಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹಾಗೂ ತಮಿಳುನಾಡು ಸರ್ಕಾರದ ನಡುವೆ ಒಂದು ಸಭೆ ನಡೆಸಿ ಎಂದು ಮನವಿ ಮಾಡಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.

ಮೈಶುಗರ್ಸ್​ ಕಂಪೆನಿಯನ್ನು ಹೇಗೆ ಉಳಿಸಿಕೊಳ್ಳಬೇಕು ಹಾಗು ಅದರಿಂದ ರೈತರಿಗೆ ಆಗುವ ಅನುಕೂಲಗಳ ಬಗ್ಗೆ ಹರಿಸುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಮಂಡ್ಯ ಮತ್ತು ಕೆಆರ್‌ಎಸ್‌ ಡ್ಯಾಂನ ಸಮಸ್ಯೆ ಬಗ್ಗೆ ಈಗಾಗಲೇ ನಾವು ಚರ್ಚೆ ಮಾಡಿದ್ದೇವೆ. ಮೊದಲು ನಾವು ಇತಿಹಾಸವುಳ್ಳ ಮೈಶುಗರ್ ಕಂಪನಿಯನ್ನು ಹೇಗೆ ಉಳಿಸಿಕೊಳ್ಳಬೇಕು ಹಾಗೂ ಅದರಿಂದ ರೈತರಿಗೆ ಆಗುವ ಅನುಕೂಲಗಳ ಬಗ್ಗೆ ಗಮನ ಹರಿಸುತ್ತಿದ್ದೇವೆ.

ಇದನ್ನೂ ಓದಿ: ಕಾಳಿ ಸೇತುವೆ ಕುಸಿತಕ್ಕೆ NHAI ನಿರ್ಲಕ್ಷ್ಯವೇ ಕಾರಣ!

ಅಲ್ಲದೆ, ಹೊಸ ಕಾರ್ಖಾನೆ ನಿರ್ಮಾಣ ಮಾಡಬೇಕೇ ಅಥವಾ ಇರುವ ಕಾರ್ಖಾನೆಯನ್ನೇ ಅಗತ್ಯ ಉಪಕರಣಗಳೊಂದಿಗೆ ಅಭಿವೃದ್ಧಿ ಪಡಿಸಬೇಕೇ ಎನ್ನುವ ಕುರಿತು ಚರ್ಚೆ ನಡೆಸಲಾಗಿದ್ದು, ತಾಂತ್ರಿಕ ವರದಿಯನ್ನು ಕೂಡಾ ಪರಿಶೀಲಿಸಲಾಗಿದೆ. ಇದರ ಆಧಾರದ ಮೇಲೆ ಮುಂದಿನ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದರು.

ಕಬ್ಬು ಬೆಳೆಯುವ ರೈತರ ಹಿತದೃಷ್ಟಿ ಅನುಸಾರ ನಾವು ಕಾರ್ಯನಿರ್ವಹಿಸುತ್ತೇವೆ. ಮೇಕೆದಾಟು ಯೋಜನೆ ಜಾರಿಗೆ ನಮ್ಮ ಸರ್ಕಾರ ಕಾನೂನು ಹೋರಾಟವನ್ನು ಮಾಡಲಿದ್ದು, ನಾನು ಈಗಾಗಲೇ ಪ್ರಧಾನಮಂತ್ರಿ ಹಾಗೂ ನೀರಾವರಿ ಸಚಿವರನ್ನು ಭೇಟಿ ಮಾಡಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹಾಗೂ ತಮಿಳುನಾಡು ಸರ್ಕಾರದ ನಡುವೆ ಒಂದು ಸಭೆ ನಡೆಸಿ ಎಂದು ಮನವಿ ಮಾಡಿದ್ದೇನೆ. ಈ ಬಗ್ಗೆ ಕೇಂದ್ರ ಸರ್ಕಾರದ ಮುಂದಿನ ಹೆಜ್ಜೆ ಏನು ಎಂಬುದನ್ನು ಕಾದು ನೋಡಬೇಕಿದೆ ಎಂದು ತಿಳಿಸಿದರು.

RELATED ARTICLES

Related Articles

TRENDING ARTICLES