ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಸ್ಪರ್ಧೆಯಿಂದ ಅನರ್ಹಗೊಳಿಸಲಾಗಿತ್ತು. ಈ ನಿರ್ಧಾರದ ವಿರುದ್ಧ ವಿನೇಶ್ ಫೋಗಟ್ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದ್ದರು.
ವಿನೇಶ್ ಅವರ ಮನವಿಯ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ, ಒಲಿಂಪಿಕ್ಸ್ ಮುಗಿಯುವುದರೊಳಗೆ ಅಂದರೆ ಆಗಸ್ಟ್ 11 ಕ್ಕೂ ಮುನ್ನ ತೀರ್ಪು ನೀಡುವುದಾಗಿ ತಿಳಿಸಿದೆ.
ಇದನ್ನೂ ಓದಿ: Paris Olympics : ಭಾರತಕ್ಕೆ ಮತ್ತೊಂದು ಪ್ರಶಸ್ತಿ: ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ ನೀರಜ್ ಚೋಪ್ರ
ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದಲ್ಲಿ ವಿನೇಶ್ ಫೋಗಟ್ ಅವರ ಮನವಿಯ ಬಗ್ಗೆ ವಾದಿಸಲು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ದೇಶದ ಪ್ರಖ್ಯಾತ ವಕೀಲರಾದ ಮತ್ತು ದುಬಾರಿ ವಕೀಲರಲ್ಲಿ ಒಬ್ಬರಾಗಿರುವ ಹರೀಶ್ ಸಾಳ್ವೆ ಮತ್ತು ವಿದುಷ್ಪತ್ ಸಿಂಘಾನಿಯಾ ಅವರನ್ನು ನೇಮಿಸಿದೆ.
ಇದೀಗ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯವು (ಸಿಎಎಸ್) ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದು, ವಿನೇಶ್ ಫೋಗಟ್ ಅವರ ಅನರ್ಹತೆಯ ವಿರುದ್ಧದ ಅರ್ಜಿಯ ಬಗ್ಗೆ ಒಲಿಂಪಿಕ್ ಕ್ರೀಡಾಕೂಟ ಮುಗಿಯುವುದರೊಳಗೆ ನಿರ್ಧಾರ ತೆಗೆದುಕೊಳ್ಳಲಾಗುವುದಾಗಿ ತಿಳಿಸಿದೆ.